ದೇಶ

ಹೈದರಾಬಾದ್ ನಲ್ಲಿ ಗೆದ್ದು ತೋರಿಸಿ: ಪ್ರಧಾನಿ ಮೋದಿ, ಅಮಿತ್ ಶಾ ಗೆ ಒವೈಸಿ ಸವಾಲು

ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಹಿರಂಗ ಸವಾಲೆಸೆದಿರುವ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಾಕತ್ತಿದ್ದರೆ ಹೈದರಾಬಾದ್ ನಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಹೇಳಿದ್ದಾರೆ.

ಹೈದರಾಬಾದ್ ನಲ್ಲಿ ಗೆದ್ದು ತೋರಿಸಿ: ಪ್ರಧಾನಿ ಮೋದಿ, ಅಮಿತ್ ಶಾ ಗೆ ಒವೈಸಿ ಸವಾಲು
ಸಂಗ್ರಹ ಚಿತ್ರ
Published On :
ಹೈದರಾಬಾದ್‌: ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಶಾಗೆ ಬಹಿರಂಗ ಸವಾಲೆಸೆದಿರುವ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಾಕತ್ತಿದ್ದರೆ ಹೈದರಾಬಾದ್ ನಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಹೇಳಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಪಕ್ಷದ ರ್ಯಾಲಿಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಒವೈಸಿ, ಹೈದರಾಬಾದ್ ಕ್ಷೇತ್ರವನ್ನು ತಮ್ಮಿಂದ ಕಿತ್ತುಕೊಳ್ಳಲು ಎಲ್ಲ ರಾಜಕೀಯ ಪಕ್ಷಗಳೂ ಪ್ರಯತ್ನಿಸುತ್ತಿವೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ. ನಿಮ್ಮ ಸಂಪೂರ್ಣ ಬಲವನ್ನು ಒಗ್ಗೂಡಿಸಿ ನನ್ನವಿರುದ್ಧ ಇಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಹೇಳಿದ್ದಾರೆ.
'ಹೈದರಾಬಾದ್ ಕ್ಷೇತ್ರವನ್ನು ನಮ್ಮಿಂದ ಕಿತ್ತುಕೊಳ್ಳಲು ಪ್ರತಿಯೊಬ್ಬರೂ ನೋಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗು ಅಮಿತ್‌ ಶಾಗೆ ಇಲ್ಲಿಂದ ಸ್ಫರ್ಧಿಸಲು ಸವಾಲೆಸೆಯುತ್ತೇನೆ. ಹೈದರಾಬಾದ್‌ನಿಂದ ಸ್ಫರ್ಧಿಸಲು ಕಾಂಗ್ರೆಸ್‌ಗೂ ಸವಾಲೆಸೆಯುತ್ತೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಟ್ಟಾಗಿ ಸ್ಫರ್ಧಿಸಿದರೂ ನಮ್ಮನ್ನು ಸೋಲಿಸಲು ಆಗುವುದಿಲ್ಲ' ಒವೈಸಿ ಹೇಳಿದ್ದಾರೆ.
ಇದೇ ವೇಳೆ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಕುರಿತು ಕಿಡಿಕಾರಿದ ಒವೈಸಿ, ಅಮಾಯಕರ ಮೇಲೆ ಹಲ್ಲೆ ಮಾಡಿ ಬೆದರಿಕೆ ಒಡ್ಡುವ ಮೂಲಕ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿ ಭಾವಿಸಿದ್ದರೆ ಅದು ಎಂದಿಗೂ ಸಾಧ್ಯವಿಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಮೌನ ವಹಿಸಿರುವುದು ಅವರ ಕಾರ್ಯಕರ್ತರ ಕಾರ್ಯಕ್ಕೆ ಅವರು ಸಮ್ಮತಿ ನೀಡಿದಂತಾಗಿದೆ ಎಂದು ಒವೈಸಿ ಹೇಳಿದರು. ಅಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾಗಿ ಈ ದೇಶದಲ್ಲಿ ದೊಡ್ಡ ರಾಜಕೀಯ ಒಕ್ಕೂಟ ಉದಯವಾಗಬೇಕು. ಸ್ಥಳೀಯ ಪಕ್ಷಗಳು ಒಗ್ಗೂಡಿ, ರಾಷ್ಟ್ರೀಯ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದು ಹೇಳುವ ಮೂಲಕ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಫೆಡರಲ್ ಫ್ರಂಟ್ ಪ್ರಸ್ತಾವಕ್ಕೆ ಪರೋಕ್ಷ ಒಪ್ಪಿಗೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.