ಸ್ವಿಸ್ ಬ್ಯಾಂಕ್ ನಲ್ಲಿರುವ ಎಲ್ಲಾ ಹಣವೂ ಕಪ್ಪು ಹಣ ಅಲ್ಲ: ಕೇಂದ್ರ ಸರ್ಕಾರ
ಸ್ವಿಸ್ ಬ್ಯಾಂಕ್ ಗಳಲ್ಲಿರುವ ಭಾರತೀಯರ ಹಣ 2017 ರಲ್ಲಿ ಶೇ.50 ರಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ತನ್ನ ಕ್ರಮಗಳ ಸಮರ್ಥನೆಗೆ ನಿಂತಿದ್ದು ಸ್ವಿಸ್ ನಲ್ಲಿರುವ...

Published On :
ನವದೆಹಲಿ: ಸ್ವಿಸ್ ಬ್ಯಾಂಕ್ ಗಳಲ್ಲಿರುವ ಭಾರತೀಯರ ಹಣ 2017 ರಲ್ಲಿ ಶೇ.50 ರಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ತನ್ನ ಕ್ರಮಗಳ ಸಮರ್ಥನೆಗೆ ನಿಂತಿದ್ದು ಸ್ವಿಸ್ ನಲ್ಲಿರುವ ಎಲ್ಲ ಹಣವೂ ಕಪ್ಪು ಹಣವಲ್ಲ ಎಂದು ಹೇಳಿದೆ.
ಹಣಕಾಸು ಸಚಿವ ಪಿಯೂಷ್ ಗೊಯಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಸ್ವಿಸ್ ಬ್ಯಾಂಕ್ ಗಳಲ್ಲಿರುವ ಎಲ್ಲಾ ಹಣವೂ ಕಪ್ಪು ಹಣವಲ್ಲ, ಒಂದು ವೇಳೆ ಎಲ್ಲಾದರೂ ತಪ್ಪು ನಡೆದಿರುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಿಟ್ಜರ್ಲ್ಯಾಂಡ್ ನೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 2018 ರ ಜ.1 ರಿಂದ ಎಲ್ಲಾ ಡಾಟಾಗಳನ್ನು ಸ್ವಿಟ್ಜರ್ಲ್ಯಾಂಡ್ ನಮ್ಮೊಂದಿಗೆ ಹಂಚಿಕೊಳ್ಳಬೇಕಾಗಿದೆ. 2019 ರಲ್ಲಿ ಈ ಮಾಹಿತಿಗಳನ್ನು ಬಹಿರಂಗಪಡಿಸಲಾಗುತ್ತದೆ. ಲೋಪದೋಷವಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಜರುಗಿಸಲಾಗುತ್ತದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿ ಸ್ವಿಸ್ ಬ್ಯಾಂಕ್ ನಲ್ಲಿನ ಠೇವಣಿ ಕಡಿಮೆಯಾಗಿದೆ. ಈ ಹಿಂದಿನ ವರದಿಗಳ ಪ್ರಕಾರ ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹಣ 2016 ರಲ್ಲಿ ಶೇ.45 ರಷ್ಟು ಇಳಿದಿದೆ ಎಂದು ಹೇಳಲಾಗಿತ್ತು. ಇದನ್ನೇ ಕೇಂದ್ರ ಸರ್ಕಾರ ತನ್ನ ಕ್ರಮಗಳ ಸಾಧನೆಗಳ ಪಟ್ಟಿಯಲ್ಲೂ ಸೇರಿಸಿತ್ತು. ಆದರೆ ಈಗ ಲೋಕಸಭಾ ಚುನಾವಣೆಗೆ ಇನ್ನು ಕೇವಲ ಒಂದು ವರ್ಷವಿರುವಾಗಲೇ ಸ್ವಿಸ್ ಬ್ಯಾಂಕ್ ಗಳಲ್ಲಿರುವ ಭಾರತೀಯರ ಹಣ 2017 ರಲ್ಲಿ ಶೇ.50 ರಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.
ಇನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಸಹ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ವಿಪಕ್ಷಗಳಿಗೆ ಬ್ಲಾಗ್ ಮೂಲಕ ತಿರುಗೇಟು ನೀಡಿದ್ದು, ಸಾರ್ವಜನಿಕ ಸಂವಾದದಲ್ಲಿ ತೊಡಗಿರುವವರು ತಮ್ಮ ಅಭಿಪ್ರಾಯ ತಿಳಿಸುವುದಕ್ಕೂ ಮುನ್ನ ಮೂಲಭೂತ ಅಂಶಗಳನ್ನು ತಿಳಿದುಕೊಂಡಿರಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


