ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಪಂಜಾಬ್ ಮೂಲದ 8 ಭಕ್ತಾದಿಗಳ ಸಾವು
ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ...

Published On :
ಶಿಮ್ಲಾ: ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಮೃತಸರ ಪಟ್ಟಣದ ಕಾಳೆ ಗಾಣಪುರ್ ಸಮೀಪದ ಗ್ರಾಮವೊಂದರ ನಿವಾಸಿಗಳು, ಕುಲ್ಲು ಜಿಲ್ಲೆಯ ಶಿಖ್ ಮುನಿಕರನ್ ದೇವಾಲಯಕ್ಕೆ ತೆರಳಿ ವಾಪಸ್ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ಗಾಯಗೊಂಡಿರುವ ಒಬ್ಬನನ್ನು ನಲಗ್ರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವನ್ನಪ್ಪಿರುವ ಎಲ್ಲರು ಒಂದೇ ಕುಟುಂಬದವರಾಗಿದ್ದಾರೆ, ಇನ್ನೋವಾ ವಾಹನದಲ್ಲಿ ಒಂದೇ ಕುಟುಂಬಸ್ಥರು ಇದ್ದರು, ಕಾರಿನಲ್ಲಿ ಹೆಚ್ಚಿನ ಮಂದಿ ಪ್ರಯಾಣಿಸುತ್ತಿದ್ದ ಕಾರಣ, ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ, ಇದರ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


