ಐಎನ್ಎಕ್ಸ್ ಮೀಡಿಯಾ ಪ್ರಕರಣ: ಸಿಬಿಐ ಅಧಿಕಾರಿಗಳಿಗಳಿಂದ ಪಿಚಿದಂಬರಂ ವಿಚಾರಣೆ
ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಹಿರಿಯ ಮುಖಂಡ ಪಿಚಿದಂಬರಂ ಅವರನ್ನೂ ಶೀಘ್ರ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Published On :
ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಹಿರಿಯ ಮುಖಂಡ ಪಿಚಿದಂಬರಂ ಅವರನ್ನೂ ಶೀಘ್ರ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಇತ್ತ ಚೆನ್ನೈನಲ್ಲಿ ಕಾರ್ತಿ ಚಿದಂಬರಂ ಬಂಧನವಾದ ಬೆನ್ನಲ್ಲೇ ಅತ್ತ ಲಂಡನ್ ನಲ್ಲಿದ್ದ ಪಿ.ಚಿದಂಬರಂ ಅವರಿಗೆ ವಿಚಾರ ತಿಳಿದಿದ್ದು, ಕೂಡಲೇ ಅವರು ಭಾರತಕ್ಕೆ ವಾಪಸ್ ಆಗಿದ್ದಾರೆ. ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ ಸಂವಾದದಲ್ಲಿ ಭಾಗವಹಿಸಲು ಲಂಡನ್‌ಗೆ ಹೋಗಿದ್ದ ಚಿದಂಬರಂ, ಮಗ ಕಾರ್ತಿ ಬಂಧನದ ಸುದ್ದಿ ತಿಳಿಯುತ್ತಲೇ ತಮ್ಮೆಲ್ಲ ಕಾರ್ಯಕ್ರಮ ರದ್ದುಪಡಿಸಿ ಭಾರತಕ್ಕೆ ಧಾವಿಸಿದ್ದಾರೆ. ಬಂಧನದ ಬಳಿಕ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ಮಗನನ್ನು ಭೇಟಿಯಾದ ಅವರು ‘ಚಿಂತೆ ಬೇಡ, ನಾನಿದ್ದೇನೆ’ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಪಿಚಿದಂಬರಂ ಅವರನ್ನೂ ಕೂಡ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಅಧಿಕಾರಿಗಳು ಈ ಬಗ್ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಶೀಘ್ರ ನ್ಯಾಯಾಲಯದ ಅನುಮತಿ ಪಡೆದು ಚಿದಂಬರಂ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
‘ಕಸ್ಟಡಿಯಲ್ಲಿರುವುದು ನೀವು ನಾವಲ್ಲ’: ಕಾರ್ತಿ ಚಿದಂಬರಂಗೆ ಅಧಿಕಾರಿಗಳ ತಿರುಗೇಟು
ಇನ್ನು ನ್ಯಾಯಾಲಯದಲ್ಲಿದ್ದಾಗ ಕಾರ್ತಿ ತಮ್ಮ ಗೆಳೆಯರೊಬ್ಬರ ಜತೆಗೆ ತಮಿಳಿನಲ್ಲಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಅಧಿಕಾರಿಯೊಬ್ಬರು ತಕ್ಷಣವೇ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಸೂಚಿಸಿದರು. ಅದಕ್ಕೆ ಉತ್ತರ ನೀಡಿದ ಕಾರ್ತಿ, ‘ನಾನು ಇರುವಾಗ ನೀವು ಕೂಡ ಪರಸ್ಪರ ಇಂಗ್ಲಿಷ್‌ನಲ್ಲಿಯೇ ಮಾತನಾಡಬೇಕು’ ಎಂದರು. ತೀಕ್ಷ್ಣವಾಗಿ ತಿರುಗೇಟು ನೀಡಿದ ಸಿಬಿಐ ಅಧಿಕಾರಿ ‘ಕಸ್ಟಡಿಯಲ್ಲಿರುವುದು ನೀವು, ನಾವಲ್ಲ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiP Chidambaramಪಿ ಚಿದಂಬರಂCBIಸಿಬಿಐಕಾರ್ತಿ ಚಿದಂಬರಂKarti ChidambaramINX Media caseಐಎನ್ಎಕ್ಸ್ ಮೀಡಿಯಾ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


