ಕಾರ್ತಿ ಚಿದಂಬರಂನನ್ನು ಸಿಬಿಐ ವಶಕ್ಕೆ ನೀಡಿರುವುದು ಸೂಕ್ತ ನಿರ್ಧಾರ: ಸುಬ್ರಮಣಿಯನ್ ಸ್ವಾಮಿ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ವಶಕ್ಕೆ ನೀಡಿರುವುದು ಸರಿಯಾದ ನಿರ್ಧಾರ ಎಂದು ಬಿಜೆಪಿ ಸಂಸದ ...

Published On :
ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ವಶಕ್ಕೆ ನೀಡಿರುವುದು ಸರಿಯಾದ ನಿರ್ಧಾರ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಅವರನ್ನು ಕೋರ್ಟ್ ಸಿಬಿಐ ವಶಕ್ಕೆ ನೀಡಿರುವುದು ಸರಿಯಾದ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.
ವಕೀಲ ಅಭಿಷೇಕ್ ಮನು ಸಿಂಘ್ವಿ ಕಾರ್ತಿ ಪರ ಏನೇ ವಾದ ಮಾಡಿದರೂ , ನ್ಯಾಯಾಲಯ ಅದ್ಯಾವುದನ್ನು ಪರಿಗಣಿಸದೇ ಸಿಬಿಐ ವಶಕ್ಕೆ ಕಳುಹಿಸಿದೆ.
ಕಾರ್ತಿ ವಿಚಾರಣೆಯಿಂದ ಚಿದಂಬರಂ ಅವರಿಗೂ ಈ ಪ್ರಕರಣಕ್ಕೂ ಸಂಬಂಧ ಇದೆಯೇ ಎಂಬುದರ ಬಗ್ಗೆ ತಿಳಿದು ಬರುತ್ತದೆ. ಈಗಾಗಲೇ ಕಾರ್ತಿ ಸಿಎಂ ಅವರನ್ನು ಬಂಧಿಸಿರುವ ಸಿಬಿಐ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಚಿದಂಬರಂ ಯೋಜನೆಗೆ ಅನುಮೋದನೆ ನೀಡುವಾಗ ಅದರ ಮೌಲ್ಯ 5 ಕೋಟಿ ರು ಇತ್ತು, ಸಹಿ ಮಾಡಿದ ನಂತರ, ರು.305 ಕೋಟಿ ಆಗಿತ್ತು ಎಂದು ತಿಳಿಸಿದ್ದಾರೆ. ಕಾರ್ತಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಭಿಷೇಕ್ ಸಿಂಗ್ವಿ ವಾದಿಸಿದರು, ಈ ವಾದಕ್ಕೆ ಯಾವುದೇ ಆಧಾರವಿಲ್ಲ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Subramanian Swamyಸುಬ್ರಮಣಿಯನ್ ಸ್ವಾಮಿCBIಸಿಬಿಐಕಾರ್ತಿ ಚಿದಂಬರಂKarti ChidambaramINX Media caseಐಎನ್ಎಕ್ಸ್ ಮೀಡಿಯಾ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


