ಮೂರೂ ರಾಜ್ಯಗಳಲ್ಲಿ ಸರ್ಕಾರ ರಚಿಸುವ ವಿಶ್ವಾಸವಿದೆ: ಕೇಂದ್ರ ಸಚಿವ ಕಿರೆಣ್ ರಿಜಿಜು
ಈಶಾನ್ಯ ಭಾರತದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಕಿರೆಣ್ ರಿಜಿಜು ಹೇಳಿದ್ದಾರೆ.

Published On :
ನವದೆಹಲಿ: ಈಶಾನ್ಯ ಭಾರತದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಕಿರೆಣ್ ರಿಜಿಜು ಹೇಳಿದ್ದಾರೆ.
ಈಶಾನ್ಯ ಭಾರತದ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಒಟ್ಟು 59 ಸ್ಥಾನಗಳ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ 25 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಸಿಪಿಎಂಗೆ ಈ ಬಾರಿ ಚುನಾವಣೆಯಲ್ಲಿ ಹಿನ್ನಡೆ ಕಂಡು ಬಂದಿದೆ. ಎಡಪಕ್ಷಗಳು ಒಟ್ಟು 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಕಳೆದ ಬಾರಿಯ ಚುನಾವಣೆಗೆ ಹೋಲಿಕೆ ಮಾಡಿದರೆ ತ್ರಿಪುರಾದಲ್ಲಿ ಬಿಜೆಪಿ ಗಣನೀಯ ಸಾಧನೆ ಗೈದಿದ್ದು, ಕಳೆದ ಬಾರಿಗಿಂತ ಈ ಬಾರಿ 35 ಸ್ಥಾನಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ.
ಇನ್ನು 59 ಸ್ಥಾನಗಳನ್ನು ಹೊಂದಿರುವ ಮೇಘಾಲಯದಲ್ಲಿ ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎನ್ ಪಿಪಿ 15 ಮತ್ತು ಬಿಜೆಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ನಾಗಾಲ್ಯಾಂಡ್ ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ, ಎನ್ ಪಿಎಫ್ ಮೈತ್ರಿಕೂಟ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್ ಡಿಪಿಪಿ ಮೈತ್ರಿಕೂಟ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಕಿರೆಣ್ ರಿಜಿಜು, ಹಾಲಿ ಟ್ರೆಂಡ್ ಗಳನ್ನು ಗಮನಿಸುತ್ತಿದ್ದರೆ ತ್ರಿಪುರಾದಲ್ಲಿ ಪ್ರಜೆಗಳ ಹೊಸ ನಿರ್ದೇಶನ ನೀಡಿದ್ದು, ಅದರಂತೆ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಪರಿಣಾಮ ರಾಜ್ಯ ರಾಜಕೀಯದ ಮೇಲೂ ಆಗಿದ್ದು, ಈಶಾನ್ಯ ಭಾರತದ ಎಲ್ಲ ಮೂರೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಅಂತೆಯೇ ಬಿಜೆಪಿ ಆಂತರಿಕ ಸಮೀಕ್ಷೆ ಅನ್ವಯ ತ್ರಿಪುರಾದಲ್ಲಿ ಬಿಜೆಪಿ 36ರಿಂದ 42 ಸ್ಥಾನಗಳಲ್ಲಿ ಜಯ ಸಾಧಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiMeghalayaಮೇಘಾಲಯNagalandTripuraನಾಗಾಲ್ಯಾಂಡ್ತ್ರಿಪುರಾNorth-East Elections 2018ಈಶಾನ್ಯ ಭಾರತ ವಿಧಾನಸಭಾ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


