ಆರ್ ಎಸ್ಎಸ್ ನ ಟಾಪ್ 2 ನೇ ಹುದ್ದೆಗೆ ದತ್ತಾತ್ರೇಯ ಹೊಸಬಾಳೆ ನೇಮಕ?
ಮುಂದಿನ ವಾರ ನಾಗ್ಪುರದಲ್ಲಿ ನಡೆಯಲಿರುವ ಆರ್ ಎಸ್ಎಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸಂಘಟನೆ ಹಾಗೂ ಸಹ ಸಂಘಟನೆಗಳಿಗೆ ಸಂಬಂಧಿಸಿದಂತೆ ಮಹತ್ತರ ಬದಲಾವಣೆಗಾಳುವ ಸಾಧ್ಯತೆಗಳಿವೆ.

Published On :
ಮುಂಬೈ: ಮುಂದಿನ ವಾರ ನಾಗ್ಪುರದಲ್ಲಿ ನಡೆಯಲಿರುವ ಆರ್ ಎಸ್ಎಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸಂಘಟನೆ ಹಾಗೂ ಸಹ ಸಂಘಟನೆಗಳಿಗೆ ಸಂಬಂಧಿಸಿದಂತೆ ಮಹತ್ತರ ಬದಲಾವಣೆಗಾಳುವ ಸಾಧ್ಯತೆಗಳಿವೆ.
ಸುಮಾರು 15,00 ಪ್ರತಿನಿಧಿಗಳು ಆರ್ ಎಸ್ ಎಸ್ ನ ಪ್ರತಿನಿಧಿ ಸಭಾದಲ್ಲಿ ಭಾಗವಹಿಸಲಿದ್ದು, ಸರ್ಕಾರ್ಯವಾಹ್( ಪ್ರಧಾನ ಕಾರ್ಯದರ್ಶಿ)ಯನ್ನು ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಆಯ್ಕೆ ಮಾಡಲಾಗುತ್ತದೆ.
ಈ ಬಾರಿಯ ಸಭೆಯಲ್ಲಿ ಆರ್ ಎಸ್ಎಸ್ ನ ಪ್ರಧಾನ ಕಾರ್ಯದರ್ಶಿ ನೇಮಕವಾಗುವ ಸಾಧ್ಯತೆ ಇದ್ದು, ಆರ್ ಎಸ್ಎಸ್ ನ ಟಾಪ್ ಎರಡನೇ ಹುದ್ದೆಗೆ ಕರ್ನಾಟಕದವರಾದ ದತ್ತಾತ್ರೇಯ ಹೊಸಬಾಳೆ ನೇಮಕವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸುರೇಶ್ ಭಯ್ಯಾಜಿ ಜೋಷಿ ಸಂಘದ ಸರ್ಕಾರ್ಯವಾಹ್ ಸ್ಥಾನದಲ್ಲಿದ್ದು 2009 ರಲ್ಲಿ ನೇಮಕಗೊಂಡಿದ್ದರು. ಕಳೆದ ಎರಡು ವರ್ಷಗಳಿಂದ ಆರೋಗ್ಯ ಸ್ಥಿತಿ ಸರಿ ಇರದ ಕಾರಣ ಜೋಷಿ ಅವರೊಂದಿಗೆ ಜಂಟಿ ಪ್ರಧಾನ ಕಾರ್ಯದರ್ಶಿಗಳಾಗಿದ್ದ ದತ್ತಾತ್ರೇಯ ಹೊಸಬಾಳೆ ಸಹ ಕಾರ್ಯನಿರ್ವಹಿಸುತ್ತಿದ್ದರು. ಈಗ ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್ ಎಸ್ಎಸ್ ನ ಸರ್ಕಾಯವಾಹ್ ಹುದ್ದೆಗೆ ಅಧಿಕೃತವಾಗಿ ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


