ಜಮ್ಮು-ಕಾಶ್ಮೀರ: ಕಳೆದ 48 ಗಂಟೆಗಳಲ್ಲಿ ನಾಲ್ವರು ಪಾಕಿಸ್ತಾನ ಸೈನಿಕರು ಹತ
ಕಳೆದ 48 ಗಂಟೆಗಳಲ್ಲಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ನಾಲ್ವರು ಪಾಕಿಸ್ತಾನ ...

ಜಮ್ಮು-ಕಾಶ್ಮೀರ: ಕಳೆದ 48 ಗಂಟೆಗಳಲ್ಲಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ನಾಲ್ವರು ಪಾಕಿಸ್ತಾನ ಯೋಧರು ಹತರಾಗಿದ್ದು ಇಬ್ಬರು ಭಾರತೀಯ ಸೇನಾ ಯೋಧರು ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.
ಮೊನ್ನೆ ಗುರುವಾರದಿಂದ ಜಮ್ಮುವಿನ ಪೂಂಚ್ ಮತ್ತು ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪಾಕಿಸ್ತಾನ ಸೈನಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಸೇನೆ 120 ಮಿಲಿ ಮೀಟರ್ ಮತ್ತು 82 ಮಿಲಿ ಮೀಟರ್ ಫಿರಂಗಿಗಳನ್ನು ಬಳಸುತ್ತದೆ.
ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿ ವೇಳೆ ಹತ್ತಿರದ ಜನವಸತಿ ಮನೆಗಳಿಗೆ ಹಾನಿಯಾಗಿವೆ. ಜಿಲ್ಲಾಡಳಿತ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳ ಶಾಲೆಗಳಿಗೆ ನಾಳೆಯವರೆಗೆ ರಜೆ ಘೋಷಿಸಿದೆ.
ಈ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹುತೇಕ ಸಮಯ ತಮ್ಮ ಮನೆಗಳೊಳಗೆ ಇರುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


