ದೇಶ

ನಮ್ಮ ಮುಂದಿನ ನಡೆ ಕರ್ನಾಟಕ : ಅಮಿತ್ ಶಾ

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕೆ ಸಂದ ಜಯವಾಗಿದ್ದು, ಕರ್ನಾಟಕವೇ ನಮ್ಮ ಮುಂದಿನ ನಡೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನಮ್ಮ ಮುಂದಿನ ನಡೆ ಕರ್ನಾಟಕ : ಅಮಿತ್ ಶಾ
ಅಮಿತ್ ಶಾ
Published On :

ದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕೆ ಸಂದ ಜಯವಾಗಿದ್ದು, ಕರ್ನಾಟಕವೇ ನಮ್ಮ ಮುಂದಿನ ನಡೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

 ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ತ್ರಿಪುರಾದಲ್ಲಿ ಬಿಜೆಪಿಗೆ ಸ್ಪಷ್ಪ ಬಹುಮತ ದೊರಕಿದೆ. ಮೇಘಾಲಯವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದಿದ್ದರೂ ಬಿಜೆಪಿ, ಎನ್ ಡಿಎ ಮೈತ್ರಿಕೂಟದ ಆಡಳಿತವಿರುವ ರಾಜ್ಯ 21 ಆಗಲಿದೆ ಎಂದರು.

ಕರ್ನಾಟಕದ ಗೆಲುವು ಮುಖ್ಯವಾಗಲಿದೆ.  ಇಲ್ಲಿ ಪಕ್ಷ ಜಯಗಳಿಸುವ ವಿಶ್ವಾಸದಲ್ಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.

ಒಡಿಶಾ, ಪಶ್ಚಿಮ ಬಂಗಾಳ, ಹಾಗೂ ಕೇರಳದಲ್ಲಿ ಬಿಜೆಪಿ ಜಯ ಗಳಿಸುವವರೆಗೂ ಸುವರ್ಣ ಯುಗ ಆರಂಭವಾಗಲು ಸಾಧ್ಯವಿಲ್ಲ. ಈ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಸುವರ್ಣ ಯುಗ ಪ್ರಾರಂಭವಾಗಲಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.