ದೇಶ

ಎಸ್.ಎಸ್.ಸಿ. ಅಭ್ಯರ್ಥಿಗಳ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯಿಂದ ಪ್ರತಿಭಟನಾಕಾರರ ಭೇಟಿ

ಭ್ರಷ್ಟಾಚಾರ ವಿರೋಧಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಭಾನುವಾರ ಸಿಬ್ಬಂದಿ ಆಯ್ಕೆ ಆಯೋಗ ( (ಎಸ್ .ಎಸ್ . ಸಿ) ಆಯುಕ್ತರನ್ನು ಭೇಟಿಯಾಗಿದ್ದಾರೆ.

ಎಸ್.ಎಸ್.ಸಿ. ಅಭ್ಯರ್ಥಿಗಳ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯಿಂದ ಪ್ರತಿಭಟನಾಕಾರರ ಭೇಟಿ
ಎಸ್.ಎಸ್.ಸಿ. ಅಭ್ಯರ್ಥಿಗಳ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯಿಂದ ಪ್ರತಿಭಟನಾಕಾರರ ಭೇತಿ
Published On :
ನವದೆಹಲಿ: ಭ್ರಷ್ಠಾಚಾರ ವಿರೋಧಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಭಾನುವಾರ ಸಿಬ್ಬಂದಿ ಆಯ್ಕೆ ಆಯೋಗ  (ಎಸ್ .ಎಸ್ . ಸಿ) ಆಯುಕ್ತರನ್ನು ಭೇಟಿಯಾಗಿದ್ದಾರೆ.
ಪ್ರತಿಭಟನಾಕಾರರನ್ನು ಭೇಟಿಯಾದ ಹಜಾರೆ ಅಹಿಂಸೆಯ ಹಾದಿಯಲ್ಲಿ ಪ್ರತಿಭಟನೆ ನಡೆಸುವಂತೆ ಹೇಳಿದರಲ್ಲದೆ ಸರ್ಕಾರ ಇವರ ಹೋರಾಟದತ್ತ ಗಮನ ನೀಡಿ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದ್ಡಾರೆ.
"ಅನ್ಯಾಯ ಹಾಗೂ ಕಿರುಕುಳವನ್ನು ಎದುರಿಸಿ ಹೋರಾಡುವಾಗ ಅಹಿಂಸೆಯ ಹಾದಿಯಲ್ಲಿ ನಡೆಯುವುದು ಬಹಳ ಮುಖ್ಯ. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಸರ್ಕಾರ ತೀರ್ಮಾನ ಕೈಗೊಳ್ಳುವವರೆಗೆ ನಾವು ಕಾಯಬೇಕಿದೆ. ನಂತರ ನಾವೇನು ಮಾಡಬೇಕೆನ್ನುವುದನ್ನು ನಿರ್ಧರಿಸೋಣ. ಈ ಮಧ್ಯೆ, ನಿಮ್ಮ ಹೋರಾಟ ಹಿಂಸಾ ಸ್ವರೂಪ ಪಡೆದುಕೊಳ್ಳಬಾರದೆಂದು ನಾನು ಮನವಿ ಮಾಡುತ್ತೇನೆ." ಹಜಾರೆ ಹೇಳಿದ್ದಾರೆ.
ಫೆ.27ರಿಂದ ಈಚೆಗೆ ದೆಹಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಸ್.ಎಸ್.ಸಿ.ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಯೋಗದ  ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು  ನಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.
ಆದರೆ ಫೆ.24ರಂದು ಎಸ್.ಎಸ್.ಸಿ. ಹೊರಡಿಸಿದ್ದ ನೋಟೀಸ್ ನಲ್ಲಿ ಫೆ.21 ರಂದು ಆಯೋಗ ನಡೆಸಿದ್ದ ಪರೀಕ್ಷೆಯು ತಾಂತ್ರಿಕ ಕಾರಣಗಳಿಂದ ವಿಫಲವಾಗಿದೆ. ಇದಕ್ಕಾಗಿ ಮಾ.9ರಂದು ಪುನಃಅ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.