ಕಾಂಗ್ರೆಸ್ ಹಾಗೂ ತಮ್ಮ ನಡುವೆ ಬಿರುಕು ಮೂಡಿಸಲು ಬಿಜೆಪಿ ಯತ್ನ : ಮೋದಿ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಆರೋಪ
ಕಾಂಗ್ರೆಸ್ ಹಾಗೂ ತಮ್ಮ ನಡುವೆ ಬಿರುಕು ಮೂಡಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಯತ್ನಿಸುತ್ತಿದ್ದಾರೆ ಎಂದುಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆರೋಪಿಸಿದ್ದಾರೆ.

ಪಂಜಾಬ್ : ಕಾಂಗ್ರೆಸ್ ಹಾಗೂ ತಮ್ಮ ನಡುವೆ ಬಿರುಕು ಮೂಡಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಯತ್ನಿಸುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆರೋಪಿಸಿದ್ದಾರೆ.
ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನರೇಂದ್ರಮೋದಿ
ಪಂಜಾಬ್ ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತನ್ನ ಪಕ್ಷದ ಮುಖ್ಯಮಂತ್ರಿಯಂತೆ ಕಾಂಗ್ರೆಸ್ ಪರಿಗಣಿಸಿಲ್ಲ. ಏಕಾಂಗಿ ಸೈನಿಕರಂತೆ ಅಮರೀಂದರ್ ಸಿಂಗ್ ಸರ್ಕಾರ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಇಂದು ಪ್ರತಿಕ್ರಿಯಿಸಿದ ಅಮರೀಂದರ್ ಸಿಂಗ್, ಯಾರೂ ನಿಮಗೆ ಹಾಗಂತ ಹೇಳಿರುವುದು , ನನ್ನ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ನಿಮಗೆ ದೂರು ನೀಡಿದೆಯಾ ಎಂದು ಪ್ರಶ್ನಿಸಿದರು.
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಾಗೂ ಕಾಂಗ್ರೆಸ್
ನಡುವೆ ಮನಸ್ತಾಪ ಮೂಡಿಸಲು ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಅಪಾದಿಸಿದ್ದಾರೆ.
ನನ್ನ ವ್ಯವಹಾರ ಗೊತ್ತು, ಹೈಕಮಾಂಡ್ ನೊಂದಿಗೆ ಸಂಬಂಧ ನಿರ್ವಹಣೆ ಹಾಗೂ ರಾಜ್ಯ ಹೇಗೆ ನಡೆಸಬೇಕೆಂಬ ಬಗ್ಗೆಯೂ ಗೊತ್ತು, ಇದನ್ನು
ಬಿಜೆಪಿಯ ಯಾವೊಬ್ಬ ನಾಯಕರು ಹೇಳಬೇಕಿಲ್ಲ ತನ್ನ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ನಂಬಿಕೆ ಇಟ್ಟಿದ್ದು, ಪಂಜಾಬ್ ನಲ್ಲಿ ಮುಕ್ತ ಸ್ವಾತಂತ್ರ್ಯ ನೀಡಿದೆ ಎಂದು ಅಮರೀಂದರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


