ದೇಶ

ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳದಲ್ಲಿಯೂ ಕಮಲ ಅರಳಲಿದೆ- ಯೋಗಿ ಆದಿತ್ಯನಾಥ್

ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಆಡಳಿತ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಂಘಟನಾ ಕೌಶಲ್ಯದಿಂದ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು ಸಾಧಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ

ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳದಲ್ಲಿಯೂ ಕಮಲ ಅರಳಲಿದೆ- ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Published On :

ದೆಹಲಿ : ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಆಡಳಿತ ಹಾಗೂ ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರ ಸಂಘಟನಾ ಕೌಶಲ್ಯದಿಂದ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು ಸಾಧಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ

ಬಿಜೆಪಿ ಪ್ರಧಾನ ಕಚೇರಿಯಲ್ಲಿಂದು ಮಾತನಾಡಿದ ಅವರು, ಹಲವು ವರ್ಷಗಳ ನಂತರ ಈಶಾನ್ಯ  ರಾಜ್ಯಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದ್ದು,ಅಲ್ಲಿನ ಜನತೆಯ ಆಶೋತ್ತರ ಈಡೇರಿಸಲಾಗುವುದು ಎಂದರು.

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳು ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದು, ಅಭಿವೃದ್ಧಿಯ ಫಲ ಅನುಭವಿಸಲಿವೆ  ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು.

ಪ್ರಧಾನಿ ನರೇಂದ್ರಮೋದಿ ಅವರ ಉತ್ತಮ ಆಡಳಿತ ಹಾಗೂ ಅಮಿತ್ ಶಾ ಅವರ ಮಾರ್ಗದರ್ಶನಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ ಯೋಗಿ ಆದಿತ್ಯನಾಾಥ್ , ಕರ್ನಾಟಕ, ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಕಮಲ ಅರಳಲಿದೆ ಎಂಬ ಅತೀವ ವಿಶ್ವಾಸ ವ್ಯಕ್ತಪಡಿಸಿದರು.

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವಕ್ತಪಡಿಸಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ಗೋರಖ್ ಪುರ, ಫುಲ್ ಪುರ್  ಲೋಕಸಭಾ ಕ್ಷೇತ್ರಗಳಿಗೆ ಮುಂದಿನ ವಾರ ನಡೆಯಲಿರುವ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.