ದೇಶ

ಚೆನ್ನೈ: ಜಯಲಲಿತಾ ಸ್ಮಾರಕದ ಎದುರು ಗುಂಡು ಹಾರಿಸಿಕೊಂಡು ಪೋಲೀಸ್ ಪೇದೆ ಆತ್ಮಹತ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸ್ಮಾರಕದ ದ ಮುಂದೆಯೇ ಕರ್ತವ್ಯ ನಿರತ ಪೋಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ.

ಚೆನ್ನೈ:  ಜಯಲಲಿತಾ ಸ್ಮಾರಕದ ಎದುರು ಗುಂಡು ಹಾರಿಸಿಕೊಂಡು ಪೋಲೀಸ್ ಪೇದೆ ಆತ್ಮಹತ್ಯೆ
ಜಯಲಲಿತಾ ಸ್ಮಾರಕ
Published On :
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸ್ಮಾರಕದ  ಮುಂದೆಯೇ ಕರ್ತವ್ಯ ನಿರತ ಪೋಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ.
ಮಧುರೈ ಮೂಲದ ಅರುಣ್ ರಾಜ್ (23) ಆತ್ಮಹತ್ಯೆಗೆ ಶರಾಣಾದ ಪೇದೆಯಾಗಿದ್ದು ಇವರು ಗ್ರೇಟರ್ ಚೆನ್ನೈ ಸಿಟಿ ಪೊಲೀಸ್ ನ ಶಸ್ತ್ರಾಸ್ತ್ರ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಚೆನ್ನೈನ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸ್ಮಾರಕದ ಭದ್ರತೆಗಾಗಿ ನಿಯೋಜಿತರಾಗಿದ್ದರು. 
Story image
ಇಂದು ಕರ್ತವ್ಯಕ್ಕೆ ಹಾಜರಾಗಿದ್ದ ಅರುಣ್ ರಾಜ್ ತನ್ನ ‘303’ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡು ಹಾರಿಸಿಕೊಂಡ ತಕ್ಷಣ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಇತರೆ ಸಿಬ್ಬಂದಿಗಳು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಿಯೇ ಅರುಣ್ ಮೃತಪಟ್ಟಿದ್ದರು.
2013ರಿಂದ ಪೋಲೀಸ್ ಇಲಾಖೆಯಲ್ಲಿ ಅರುಣ್ ರಾಜ್ ಸೇವೆ ಸಲ್ಲಿಸುತ್ತಿದ್ದರು. ಪೇದೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.  ನಗರ ಪೊಲೀಸ್ ಆಯುಕ್ತ ಎ.ಕೆ. ವಿಶ್ವನಾಥನ್ ಮತ್ತು ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.