ಉಪರಾಷ್ಟ್ರಪತಿ, ರಾಷ್ಟ್ರಪತಿಗಳ ವಾಹನಗಳಿಗೆ ಶೀಘ್ರವೇ ನಂಬರ್ ಪ್ಲೇಟ್: ದೆಹಲಿ ಕೋರ್ಟ್ ಗೆ ಮಾಹಿತಿ
ರಾಷ್ತ್ರಪತಿ, ಉಪರಾಷ್ಟ್ರಪತಿಗಳ ವಾಹನಗಳಲ್ಲಿ ಇನ್ನು ಮುಂದೆ ನೋಂದಣಿ ಸಂಖ್ಯೆಯಿರುವ ನಂಬರ್ ಪ್ಲೇಟ್ ನ್ನು ಪ್ರದರ್ಶಿಸಲಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಗೆ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ

Published On :
ನವದೆಹಲಿ: ರಾಷ್ತ್ರಪತಿ, ಉಪರಾಷ್ಟ್ರಪತಿಗಳ ವಾಹನಗಳಲ್ಲಿ ಇನ್ನು ಮುಂದೆ ನೋಂದಣಿ ಸಂಖ್ಯೆಯಿರುವ ನಂಬರ್ ಪ್ಲೇಟ್ ನ್ನು ಪ್ರದರ್ಶಿಸಲಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಗೆ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ.
ಹಂಗಾಮಿ ನ್ಯಾ. ಗೀತಾ ಮಿತ್ತಲ್ ಹಾಗೂ ಸಿಹರಿ ಶಂಕರ್ ವಿಭಾಗೀಯ ಪೀಠಕ್ಕೆ ಸಚಿವಾಲಯ ಮಾಹಿತಿ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ವಾಹನಗಳನ್ನು ನೋಂದಣಿ ಮಾಡಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.
ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಲೆಫ್ಟಿನೆಂಟ್ ಗೌರ್ನರ್ ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿಗಳು ಬಳಕೆ ಮಾಡುವ ವಾಹನಗಳನ್ನು ನೋಂದಣಿ ಮಾಡಿಸಿ ನಿಯಮದಂತೆಯೇ ನಂಬರ್ ಪ್ಲೇಟ್ ನ್ನು ಪ್ರದರ್ಶಿಸುವಂತೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಪರವಾಗಿ ರಾಜೇಶ್ ಗೋಗ್ನಾ ಪ್ರಮಾಣಪತ್ರ ಸಲ್ಲಿಸಿದ್ದು, ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿಗಳು ಬಳಕೆ ಮಾಡುತ್ತಿರುವ 14 ವಾಹನಗಳ ನೋಂದಣಿ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಕೋರ್ಟ್ ಗೆ ಮಾಹಿತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?
ವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!


