ಮುಲಾಯಂ 'ರಾವಣ', ಮಾಯಾವತಿ 'ಶೂರ್ಪನಖಿ': ಬಿಜೆಪಿ ಸಚಿವ
ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಸಮಾಜವಾದಿ ಪಕ್ಷದ ಜತೆ ಕೈಜೋಡಿಸಲು ಮುಂದಾಗಿದ್ದು ಇದಕ್ಕೆ ರಾಜ್ಯ ಬಿಜೆಪಿ ಸಚಿವ ಕಿಡಿಕಾರಿದ್ದಾರೆ...

Published On :
ಲಖನೌ: ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಸಮಾಜವಾದಿ ಪಕ್ಷದ ಜತೆ ಕೈಜೋಡಿಸಲು ಮುಂದಾಗಿದ್ದು ಇದಕ್ಕೆ ರಾಜ್ಯ ಬಿಜೆಪಿ ಸಚಿವ ಕಿಡಿಕಾರಿದ್ದಾರೆ.
ಅಹಲಾಬಾದ್ ನ ಪ್ರೀತಂ ನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ನಾಗರೀಕ ವಿಮಾನಯಾನ ಸಚಿವ ನಂದ ಗೋಪಾಲ್ ಗುಪ್ತಾ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಕಲಿಯುಗದ ರಾವಣನಂತೆ, ಇವರೊಂದಿಗೆ ಕೈಜೋಡಿಸಲು ಮುಂದಾಗಿರುವ ಬಿಎಸ್ಸಿ ಮುಖ್ಯಸ್ಥೆ ಮಾಯಾವತಿ ಅವರು ರಾವಣ ಸೋದರಿ ಶೂರ್ಪನಖಿ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ದೇವರಂತೆ ಕಾಣುತ್ತಿದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹನುಮಂತನಂತಿದ್ದಾರೆ. ಇನ್ನು ಮುಲಾಯಂ ಪುತ್ರ ಅಖಿಲೇಶ್ ಯಾದವ್ ಮೇಘನಾದರನಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರೀಚ ಎಂದು ವಿಶೇಷ ಪಟ್ಟ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಮುಲಾಯಂ ಸಿಂಗ್ ಯಾದವ್Mulayam Singh YadavUttar pradeshಉತ್ತರ ಪ್ರದೇಶMayawatiಮಾಯಾವತಿNand Gopal Guptaನಂದಗೋಪಾಲ್ ಗುಪ್ತಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


