ಈಶಾನ್ಯ ಭಾಗದ ಜನರ ನಂಬಿಕೆ ಬದಲಾಗಿದೆ: ರಾಜನಾಥ್ ಸಿಂಗ್
ಈಶಾನ್ಯ ಭಾರತದಲ್ಲಿನ ನಂಬಿಕೆ ಮತ್ತು ಗ್ರಹಿಕೆ ಬದಲಾಗಿದ್ದು. ಕಾಂಗ್ರೆಸ್ ಪಕ್ಷ ಮಾತ್ರ ಗೆಲ್ಲಬಹುದು ಎಂಬ ನಂಬಿಕೆಯನ್ನು ಬಿಜೆಪಿ ಹೊಡೆದು ಹಾಕಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

Published On :
ಶಿಲ್ಲಾಂಗ್: ಈಶಾನ್ಯ ಭಾರತದಲ್ಲಿನ ನಂಬಿಕೆ ಮತ್ತು ಗ್ರಹಿಕೆ ಬದಲಾಗಿದ್ದು. ಕಾಂಗ್ರೆಸ್ ಪಕ್ಷ ಮಾತ್ರ ಗೆಲ್ಲಬಹುದು ಎಂಬ ನಂಬಿಕೆಯನ್ನು ಬಿಜೆಪಿ ಹೊಡೆದು ಹಾಕಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮೇಘಾಲಯ ರಾಜಧಾನಿ ಶಿಲ್ಲಾಂಗ್ ನಲ್ಲಿ ಇಂದು ನಡೆದ ಕನ್ರಾಡ್ ಸಂಗ್ಮಾ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾರ್ಯಾಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ಈಶಾನ್ಯ ಭಾರತದ ಜನರ ನಂಬಿಕೆ ಬದಲಾಗಿದ್ದು, ಇದೀಗ ಬಿಜೆಪಿ ಮೇಲೆ ಜನ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಮಾತ್ರವೇ ಗೆಲ್ಲಬಹುದು ಎಂಬ ನಂಬಿಕೆಯನ್ನು ಬಿಜೆಪಿ ಸುಳ್ಳು ಮಾಡಿದ್ದು. ಜನರ ನಂಬಿಕೆ ಮತ್ತು ವಿಶ್ವಾಸದೊಂದಿಗೆ ಈಶಾನ್ಯದ ಮೂರು ರಾಜ್ಯಗಳಲ್ಲಿಯೂ ತನ್ನ ಮೈತ್ರಿಕೂಟದೊಂದಿಗೆ ಸರ್ಕಾರ ರಚನೆ ಮಾಡಿದೆ ಎಂದು ಹೇಳಿದರು.
ಇನ್ನು ಇತ್ತೀಚೆಗೆ ನಡೆದ ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 2 ಸ್ಥಾನಗಳು ಲಭಿಸಿದ್ದರೂ, ಎನ್ ಪಿಪಿ ಮತ್ತು ಇತರೆ ಮೂರು ಪಕ್ಷಗಳೊಂದಿಗೆ ಸೇರಿ ಬಿಜೆಪಿ ಕನ್ರಾಡ್ ಸಂಗ್ಮಾ ಅವರ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ. ಇಂದು ಕನ್ರಾಡ್ ಸಂಗ್ಮಾ ಅವರು ಮೇಘಾಲಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MeghalayaಮೇಘಾಲಯShillongಶಿಲ್ಲಾಂಗ್oath taking ceremonyಪ್ರಮಾಣ ವಚನ ಸ್ವೀಕಾರ ಸಮಾರಂಭNPPಎನ್ ಪಿಪಿConrad Sangmaಕನ್ರಾಡ್ ಸಂಗ್ಮಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


