ಮಾರ್ಚ್ 13ರಂದು ಔತಣ ಕೂಟಕ್ಕೆ ಪ್ರತಿಪಕ್ಷಗಳ ನಾಯಕರಿಗೆ ಸೋನಿಯಾ ಗಾಂಧಿ ಆಹ್ವಾನ
ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಮಾರ್ಚ್ 13 ರಂದು ಪ್ರತಿಪಕ್ಷ ನಾಯಕರುಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.

ದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಮಾರ್ಚ್ 13 ರಂದು ಪ್ರತಿಪಕ್ಷ ನಾಯಕರುಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ವಿರುದ್ಧ ಒಕ್ಕೂಟ ರಚಿಸುವ ಉದ್ದೇಶದಿಂದ ಈ ಔತಣಕೂಟ ಆಯೋಜಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳನ್ನು ಕೈ ಜೋಡಿಸಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳೊಂದಿಗೆ ಒಕ್ಕೂಟ ರಚಿಸಿಕೊಳ್ಳುವುದು ಇದರ ಉದ್ದೇಶ ಎನ್ನಲಾಗಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಯೇತರ ಪಕ್ಷಗಳ ಸಂಯುಕ್ತ ರಂಗ ರಚಿಸುವ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸೋನಿಯಾಗಾಂಧಿ ಅವರಿಂದ ಪ್ರತಿಪಕ್ಷ ನಾಯಕರುಗಳಿಗೆ ಆಹ್ವಾನ ಬಂದಿದ್ದು, ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ವಿರುದ್ಧ ಒಟ್ಟಾಗಿ ಪ್ರತಿಭಟನೆ ನಡೆಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖಂಡ ಸ್ಟಾಲಿನ್, ಟಿಡಿಪಿಯ ನಾಯಕರು ಸಹ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಸಂಸತ್ತಿನಲ್ಲಿ ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಟಿಆರ್ ಎಸ್, ಟಿಡಿಪಿ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಟಿಎಂಸಿ, ಎಡಪಕ್ಷ, ಡಿಎಂಕೆ ಮತ್ತಿತರ ಪಕ್ಷಗಳೊಂದಿಗೆ ಉತ್ತಮ ಸಹಕಾರವಿದೆ ಎಂದು ಟಿಎಂಸಿ ನಾಯಕ ಡೇರಿಕ್ ಓ ಬ್ರೈಯಿನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


