ಮೂರು ವರ್ಷಗಳಿಂದ ಜಮ್ಮುಕಾಶ್ಮೀರದಲ್ಲಿ 29 ಸೈನಿಕರು ಹುತಾತ್ಮ - ಲೋಕಸಭೆಗೆ ಸರ್ಕಾರ ಮಾಹಿತಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.

ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.
ದಾಳಿ ವೇಳೆ 22 ಉಗ್ರರನ್ನು ಹತ್ಯೆಗೈಯಲಾಗಿದ್ದು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಸುಭಾಷ್ ಭಾಮ್ರೆ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
2016ರಲ್ಲಿ ಉರಿ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿ ವೇಳೆಯಲ್ಲಿ ಅತಿ ಹೆಚ್ಚಿನ 26 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಈ ವರ್ಷ ಜಮ್ಮುವಿನ ಸೇನಾ ನೆಲೆ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಆರು ಸೈನಿಕರು ಹುತಾತ್ಮರಾಗಿದ್ದಾರೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ ರಾಜ್ಯಸಭೆಗೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಹನ್ಸ್ ರಾಜ್ ಗಂಗರಾಮ್ ಅಹಿರ್, ಕಳೆದ ಮೂರು ವರ್ಷಗಳಲ್ಲಿ 872 ಉಗ್ರರ ದಾಳಿ ಪ್ರಕರಣಗಳು ಸಂಭವಿಸಿದ್ದು, 4799 ಕಲ್ಲೆಸೆತ ಪ್ರಕರಣಗಳು ನಡೆದಿವೆ. ಪ್ರತಿದಿನ ಆರು ಕಲ್ಲೆಸೆತ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದರು.
ಒಟ್ಟಾರೇ, ಕಳೆದ ಮೂರು ವರ್ಷಗಳಲ್ಲಿ 471 ಉಗ್ರರ ದಾಳಿ ನಡೆದಿದ್ದು, 201 ಸೈನಿಕರು ಹುತಾತ್ಮರಾಗಿದ್ದಾರೆ. 72 ಮಂದಿ ಸಾರ್ವಜನಿಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.
ದೇಶದೊಳಗೆ ಒಳನುಗ್ಗುವ ಸಲುವಾಗಿ ಗಡಿ ಪ್ರದೇಶದಾದ್ಯಂತ ಉಗ್ರರ ಉಪಟಳ ಕಂಡುಬರುತ್ತಿದೆ ಎಂದು ಅವರು ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


