ದೇಶ

ಎನ್ ಡಿಎಗೆ ಟಿಡಿಪಿ ಗುಡ್ ಬೈ?: ರಾಜಿನಾಮೆ ನೀಡುವಂತೆ ಕೇಂದ್ರ ಸಚಿವರಿಗೆ ಆಂಧ್ರ ಸಿಎಂ ನಾಯ್ಡು ಸೂಚನೆ

ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ)...

ಎನ್ ಡಿಎಗೆ ಟಿಡಿಪಿ ಗುಡ್ ಬೈ?: ರಾಜಿನಾಮೆ ನೀಡುವಂತೆ ಕೇಂದ್ರ ಸಚಿವರಿಗೆ ಆಂಧ್ರ ಸಿಎಂ ನಾಯ್ಡು ಸೂಚನೆ
ಚಂದ್ರಬಾಬು ನಾಯ್ಡು
Published On :
ಹೈದರಾಬಾದ್: ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ) ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಹೊರ ಬರಲು ಮುಂದಾಗಿದೆ.
ಡಿಟಿಪಿಯ ಕೇಂದ್ರ ಸಚಿವರಾದ ಅಶೋಕ್ ಗಜಪತಿ ರಾಜು ಮತ್ತು ವೈಎಸ್ ಚೌಧರಿ ಅವರಿಗೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಸೂಚಿಸಿದ್ದಾರೆ. 
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಘೋಷಿಸಿದ ಬಳಿಕ ಟಿಡಿಪಿ ಈ ನಿರ್ಧಾರಕ್ಕೆ ಬಂದಿದೆ.
ಇದು ನಮ್ಮ ಮೊದಲ ಹೆಜ್ಜೆ. ನಂತರ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು. ಅರುಣ್ ಜೇಟ್ಲಿ ಅವರ ಹೇಳಿಕೆ ನಿರೀಕ್ಷಿತ. ರಾಜ್ಯಕ್ಕೆ ಅವರು ಸಹಾಯ ಮಾಡಲ್ಲ ಎಂದು ನಾಯ್ಡು ಹೇಳಿದ್ದಾರೆ.
ನಮ್ಮ ಸಚಿವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಲು ಕರೆ ಮಾಡಿದ್ದೆ. ಆದರ ಅವರು ಕರೆ ಸ್ವೀಕರಿಸಲಿಲ್ಲ ಎಂದು ನಾಯ್ಡು ತಿಳಿಸಿದ್ದಾರೆ.
ಮುಂದೆ ಎನ್ ಡಿಎ ಜೊತೆಗಿನ 'ಮೈತ್ರಿ ಕಡಿದುಕೊಳ್ಳಲು ಮುಖ್ಯಮಂತ್ರಿ ನಾಯ್ಡು ಕ್ರಮ ಕೈಗೊಳ್ಳಲಿದ್ದಾರೆ. ಇಬ್ಬರು ಕೇಂದ್ರ ಸಚಿವರು ರಾಜಿನಾಮೆ ನೀಡುವುದರೊಂದಿಗೆ ಈ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.