ಪ್ರತಿಮೆ ಧ್ವಂಸ ಪ್ರಕರಣ: ಬಿಜೆಪಿ ಕಾರ್ಯಕರ್ತ, ಮುಖಂಡರ ಕೈವಾಡವಿದ್ದರೆ ಶಿಸ್ತು ಕ್ರಮ: ಅಮಿತ್ ಶಾ
ಘಟನೆಯಲ್ಲಿ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಪಾಲ್ಗೊಂಡಿರುವುದು ಸಾಬೀತಾದರೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

Published On :
ನವದೆಹಲಿ: ತ್ರಿಪುರಾ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಮೆಗಳನ್ನು ಧ್ವಂಸ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ಘಟನೆಯಲ್ಲಿ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಪಾಲ್ಗೊಂಡಿರುವುದು ಸಾಬೀತಾದರೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.
ಈ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಸರಣಿ ಟ್ವೀಟ್ ಗಳನ್ನು ಮಾಡಿ ಪ್ರತಿಮೆ ಧ್ವಂಸ ಘಟನೆಗಳನ್ನು ಖಂಡಿಸಿದ್ದಾರೆ. ಪ್ರತಿಮೆಗಳ ಮೇಲಿನ ದಾಳಿಯನ್ನು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಹೇಳಿರುವ ಅಮಿತ್ ಶಾ, ಯಾವುದೇ ಪಕ್ಷದ ಕಾರ್ಯಕರ್ತರೂ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಒಂದು ವೇಳೆ ಯಾರಾದರೂ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಕೃತ್ಯದಲ್ಲಿ ಭಾಗಿಯಾಗಿದ್ದರೆ ಕಠಿಣ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಭಾರತದಲ್ಲಿವ್ಯಾಪಕವಾದ ಪರಿಕಲ್ಪನೆಗಳು ಮತ್ತು ಸಿದ್ಧಾಂತಗಳು ಅಸ್ತಿತ್ವದಲ್ಲಿವೆ. ಒಂದ ಪಕ್ಷವಾಗಿ ಪ್ರತಿಮೆ ಮೇಲಿನ ದಾಳಿ ಪ್ರಕರಣವನ್ನು ಖಂಡಿಸುತ್ತೇವೆ. ತಮಿಳುನಾಡು ಮತ್ತು ತ್ರಿಪುರಾ ಬಿಜೆಪಿ ಘಟಕದ ಮುಖ್ಯಸ್ಥರೊಂದಿಗೆ ತಾವು ಚರ್ಚಿಸಿದ್ದು, ಬಿಜೆಪಿಗರು ಕೃತ್ಯದಲ್ಲಿ ಪಾಲ್ಗೊಂಡಿದ್ದರೆ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುನವದೆಹಲಿNew DelhibjpಬಿಜೆಪಿTamil NaduAmit Shahಅಮಿತ್ ಶಾTripuraತ್ರಿಪುರಾStatue destroying Rowಪುತ್ಥಳಿ ಮೇಲೆ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


