ಕಾರ್ತಿ ಚಿದಂಬರಂಗೆ ನಾರ್ಕೋ ಪರೀಕ್ಷೆ, ದೆಹಲಿ ನ್ಯಾಯಾಲಯದ ಅನುಮತಿ ಕೇಳಿದ ಸಿಬಿಐ
ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಗೆ ನಾರ್ಕೊ ಅನಾಲಟಿಕ್ಸ್ ಪರೀಕ್ಷೆ ನಡೆಸಲು ಅನುಮತಿ ಕೋರಿ ಸಿಬಿಐ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.

Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಗೆ ನಾರ್ಕೊ ಅನಾಲಟಿಕ್ಸ್ ಪರೀಕ್ಷೆ ನಡೆಸಲು ಅನುಮತಿ ಕೋರಿ ಸಿಬಿಐ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.
ಕಾರ್ತಿ ಚಿದಂಬರಂ ಅವರ ಚಾರ್ಟರ್ಡ್ ಅಕೌಂಟೆಂಟ್ ಎಸ್. ಭಾಸಕರ ರಾವ್ ನಡೆಸಿದ್ದಾರೆನ್ನಲಾದ ಅಕ್ರಮ ಹಣದ ವರ್ಗಾವಣೆ, ಇಂದ್ರಾಣಿ ಮುಖರ್ಜಿಸಂಬಂಧಿತ ಪ್ರಕರಣ ದ ಅರ್ಜಿಗಳು ಮಾ.9ರಂದು ವಿಚಾರಣೆಗೆ ಬರಲಿದೆ. ಅದೇ ದಿನದಂದು ಸಿಬಿಐ ನ ಪ್ರಸ್ತುತ ಮನವಿಯನ್ನೂ ಪರಿಶೀಲನೆ ನಡೆಸಲಾಗುತ್ತದೆ ಎಂದು ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುನೀಲ್ ರಾಣಾ ಹೇಳಿದ್ದಾರೆ.
ಕಾರ್ತಿ ಚಿದಂಬರಂ ಅವರನ್ನು ಇನ್ನೂ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದ್ದು ಪ್ರಕರಣದ ಸತ್ಯಾಸತ್ಯತೆಯ ಕುರಿತ ಪುರಾವೆಗಳನ್ನು ಪಡೆದುಕೊಳ್ಳಲು ನಿರಂತರ ತನಿಖೆ ಅಗತ್ಯವೆಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐಕಾರ್ತಿ ಚಿದಂಬರಂKarti ChidambaramINX Media caseಐಎನ್ಎಕ್ಸ್ ಮೀಡಿಯಾ ಪ್ರಕರಣnarco analysis testನಾರ್ಕೊ ಅನಾಲಿಟಿಕ್ಸ್ ಪರೀಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


