ದೇಶ

ತೊಗಾಡಿಯಾ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರು

ಹಿಂದೂ ವಿಶ್ವ ಪರಿಷತ್ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಯಾಣಿಸುತ್ತಿದ್ದ ಬುಲೆಟ್ ಪ್ರೂಫ್ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ನಡೆದಿದೆ...

ತೊಗಾಡಿಯಾ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರು
ತೊಗಾಡಿಯಾ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು
Published On :
ಸೂರತ್: ಹಿಂದೂ ವಿಶ್ವ ಪರಿಷತ್ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಯಾಣಿಸುತ್ತಿದ್ದ ಬುಲೆಟ್ ಪ್ರೂಫ್ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ನಡೆದಿದೆ. 
ಗುಜರಾತ್ ರಾಜ್ಯದ ಸೂರತ್ ನಿಂದ ಅಹಮದಾಬಾದ್ ನತ್ತ ತೊಗಾಡಿಯಾ ಅವರು ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬರುತ್ತಿದ್ದ ಟ್ರಕ್ ವೊಂದು ತೊಗಾಡಿಯಾ ಅವರ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೊಗಾಡಿಯಾ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. 
ತೊಗಾಡಿಯಾ ಅವರಿಗೆ ಝೆಡ್ ಪ್ರಸ್ ಭದ್ರತೆ ನೀಡಲಾಗಿದ್ದು, ಅಪಘಾತ ನಡೆದ ಸಂದರ್ಭದಲ್ಲಿ ತೊಗಾಡಿಯಾ ಅವರ ಭದ್ರತಾ ಸಿಬ್ಬಂದಿಗಳ ಕಾರುಗಳು ಕೂಡ ಸ್ವಲ್ಪ ದೂರದಲ್ಲಿಯೇ ಇದ್ದವು ಎಂದು ವರದಿಗಳು ತಿಳಿಸಿವೆ. 
ಝೆಡ್ ಪ್ಲಸ್ ಭದ್ರತೆ ನೀಡಲಾಗಿದ್ದರೂ, ಪೊಲೀಸರು ನನಗೆ ಬೆಂಗಾವಲು ಪಡೆಗಳನ್ನು ನೀಡಲಿಲ್ಲ. ಇಂದಿನ ನನ್ನ ಪ್ರಯಾಣದ ಬಗ್ಗೆ ಪೊಲೀಸರಿಗೆ ನಾನು ಮಾಹಿತಿ ನೀಡಿದ್ದೆ. ಆದರೂ ಭದ್ರತೆ ನೀಡಲಿಲ್ಲ. ನನ್ನ ಹತ್ಯೆಗೆ ಪಿತೂರಿ ನಡೆಸಲಾಗಿದೆ. ನನ್ನ ಭದ್ರತೆ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಕುರಿತು ನಾನು ದೂರು ನೀಡುತ್ತೇನೆಂದು ತೊಗಾಡಿಯಾ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.