ಟಿಡಿಪಿ ಬಳಿಕ ಬಿಜೆಪಿ ಸರದಿ, ಆಂಧ್ರ ಬಿಜೆಪಿ ಸಚಿವರಿಂದ ರಾಜಿನಾಮೆಗೆ ನಿರ್ಧಾರ
ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುಲ ಟಿಡಿಪಿ ಮುಂದಾಗಿರುವ ಬೆನ್ನಲ್ಲೇ, ಇದೀಗ ಆಂಧ್ರ ಪ್ರದೇಶ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯಲು ಆಂಧ್ರ ಪ್ರದೇಶ ಬಿಜೆಪಿ ಘಟಕ ಮುಂದಾಗಿದೆ.

Published On :
ಅಮರಾವತಿ: ಆಂಧ್ರ ಪ್ರದೇಶ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುಲ ಟಿಡಿಪಿ ಮುಂದಾಗಿರುವ ಬೆನ್ನಲ್ಲೇ, ಇದೀಗ ಆಂಧ್ರ ಪ್ರದೇಶ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯಲು ಆಂಧ್ರ ಪ್ರದೇಶ ಬಿಜೆಪಿ ಘಟಕ ಮುಂದಾಗಿದೆ.
ಪ್ರಸ್ತುತ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಜು ಅವರ ಕ್ಯಾಬಿನೆಟ್ ನಲ್ಲಿರುವ ಕಮಿನೇನಿ ಶ್ರೀನಿವಾಸ್ ಮತ್ತು ಪೈಡಿಕೊಂಜಲ ಮಾಣಿಕ್ಯಾಲಾರಾವ್ ಅವರು ತಮ್ಮ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಬಿಜೆಪಿ ವಕ್ತಾರ ಅಕುಲಾ ಸತ್ಯನಾರಾಯಣ ರಾವ್ ಅವರು ಮಾಹಿತಿ ನೀಡಿದ್ದಾರೆ. ಅಂತೆಯೇ ರಾಜಿನಾಮೆ ನೀಡುತ್ತಿರುವ ಹಿನ್ನಲೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೂ ಬಿಜೆಪಿ ಸಚಿವರು ಗೈರು ಹಾಜರಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ನಾಯ್ಡು ನಿರ್ಧಾರ ಹೊರ ಬೀಳುತ್ತಿದ್ದಂತೆಯೇ ನಿನ್ನೆ ಹೇಳಿಕ ನೀಡಿದ್ದ ಬಿಜೆಪಿ ಮುಖಂಡ ಕೃಷ್ಣ ಸಾಗರ್ ರಾವ್ ಅವರು, ನಾಯ್ಜು ಓರ್ವ ಅವಕಾಶವಾದಿ ರಾಜಕಾರಣೆ ಎಂದು ಟೀಕಿಸಿದ್ದರು.
ನಿನ್ನೆಯಷ್ಟೇ ಟಿಡಿಪಿ ಕೇಂದ್ರ ಸಚಿವರಾದ ಅಶೋಕ್ ಗಜಪತಿ ರಾಜು ಮತ್ತು ವೈಎಸ್ ಚೌದರಿ ಅವರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡುವಂತೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಜು ಅವರು ಸೂಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra Pradeshಆಂಧ್ರ ಪ್ರದೇಶChandrababu NaiduAmaravathiಅಮರಾವತಿTelugu Desam Partyತೆಲುಗು ದೇಶಂ ಪಕ್ಷವಿಶೇಷ ಸ್ಥಾನಮಾನSpecial Statusಚಂದ್ರಬಾಬು ನಾಯ್ದು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


