ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದಾನೆ: ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ 'ಸುಪ್ರೀಂ' ಅನುಮತಿ
ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ...

Published On :
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ.
ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ. ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದು, ಆತನಿಗೆ ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಅನುಮತಿ ನೀಡಬಹುದು ಎಂದು ಸುಪ್ರೀಂಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನಿಕ ನ್ಯಾಯಪೀಠ ಹೇಳಿದೆ, ಅಲ್ಲಗೆ, ದಯಾಮರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳ ಅನ್ವಯ ಕಾನೂನು ರೂಪಿಸವಂತೆಯೂ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಪುನಶ್ಚೇತನಗೊಳ್ಳುವ ಯಾವುದೇ ಸಾಧ್ಯತೆಗಳು ಇಲ್ಲದ ಪರಿಸ್ಥಿತಿಯಿದ್ದಾಗ, ಬದುಕಿರಲು ಇಚ್ಛಿಸದ ವ್ಯಕ್ತಿಗೆ ಸಂಕಷ್ಟದಲ್ಲಿ ಜೀವನ ಮುಂದುವರಿಸುವ ಸ್ಥಿತಿ ಇರಬಾರದು. ಒಂದು ವೇಳೆ ವ್ಯಕ್ತಿ ಅಥವಾ ರೋಗಿಯು ತಾನು ಭವಿಷ್ಯದಲ್ಲಿ ಕೋಮಾ ಸ್ಥಿತಿಗೆ ತಲುಪಿದರೆ ಜೀವರಕ್ಷಕದ ಸಹಾಯದಿಂದ ಬದುಕಿಸದಿರಿ ಎಂದು ಲಿವಿಂಗ್ ವಿಲ್ ಬರೆಯಲು ನ್ಯಾಯಾಲಯದ ಇದೇ ವೇಳೆ ಅನುಮತಿ ನೀಡಿದೆ.
2008ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಕಾಮನ್ ಕಾಸ್ ಸರ್ಕಾರೇತರ ಸಂಘಟನೆಯು, ಭೀಕರ ಕಾಯಿಲೆಗೆ ತುತ್ತಾಗಿ ಚೇತರಿಕೆ ಅಸಾಧ್ಯ ಎಂಬ ಸ್ಥಿತಿಗೆ ತಲುಪಿದ ರೋಗಿಗೆ ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸುವ ಹಕ್ಕನ್ನು ನೀಡಬೇಕು. ಇಲ್ಲದೇ ಇದ್ದಲ್ಲಿ ಆತನ ವೇದನೆಯನ್ನು ಸುದೀರ್ಘಗೊಳಿಸುತ್ತೆ ಎಂದು ವಾದಿಸಿತ್ತು.
ಕೃತಕ ಜೀವರಕ್ಷದ ವೈದ್ಯಕೀಯ ನೆರವು ಮುಂದುವರೆಸಬಾರದು ಎಂಬ ಕೋರಿಕೆಯನ್ನು ವಿರೋಧಿಸಿದ್ದ ಕೇಂದ್ರ ಸರ್ಕಾರವು ಇದನ್ನು ಆತ್ಮಹತ್ಯೆಗೆ ಸಮ ಎಂದು ವಾದಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂಕೆ ಸುಪ್ರೀಂಕೋರ್ಟ್ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕಾನೂನು ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿತ್ತು.
ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರು, ಕೃತಕ ಜೀವರಕ್ಷಕ ವೈದ್ಯಕೀಯ ಸವಲತ್ತುಗಳ ಮೂಲಕ ಸಾವಿನ ಸನಿಹದಲ್ಲಿರುವ ವ್ಯಕ್ತಿಯ ಜೀವ ರಕ್ಷಿಸುವ ಯತ್ನ ವ್ಯಕ್ತಿಯ ಸಹಜ ಆಯಸ್ಸನ್ನು ಅಸಹಜ ರೀತಿಯಲ್ಲಿ ವೃದ್ಧಿಸುವ ಕ್ರಮವಾಗುತ್ತದೆ ಎಂದು ವಾದ ಮಾಡಿಸಿದ್ದರು.
ದಶಕಗಳ ಕಾಲ ಮರಣಶಯ್ಯೆಯಲ್ಲಿದ್ದ ಕರ್ನಾಟಕ ಮೂಲಕ ಶುಶ್ರೂಷಕಿ ಮತ್ತು ಮುಂಬೈ ನಿವಾಸಿ ಅರುಣಾ ಶಾನುಭಾಗ್ ಅವರು ದಯಾಮರಣ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, 2011ರಲ್ಲಿ ಸುಪ್ರೀಂಕೋರ್ಟ್ ಅರುಣಾ ಅವರ ದಯಾಮರಣ ಬೇಡಿಕೆಯನ್ನು ನಿರಾಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


