ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ಇನ್ನೂ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ
ಐಎಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ನ್ಯಾಯಾಲಯವು ಕಾರ್ತಿ ಚಿದಂಬರಂ ಅವರನ್ನು ಇನ್ನೂ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

ನವದೆಹಲಿ: ಐಎಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ನ್ಯಾಯಾಲಯವು ಕಾರ್ತಿ ಚಿದಂಬರಂ ಅವರನ್ನು ಇನ್ನೂ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ಕಳೆದ 9 ದಿನಗಳಿಂದ ಸಿಬಿಐ ವಶದಲ್ಲಿದಲ್ಲಿರುವ ಕಾರ್ತಿ ಚಿದಂಬಂರಂ ಅವರ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ದೆಹಲಿ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು.
ಪ್ರಕರಣ ಸಂಬಂಧ ಒಂದು ಸಿಡಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕಿದೆ. ಈ ಸಂಬಂಧ ಹೆಚ್ಚು ವಿಚಾರಣೆ ಮಾಡಬೇಕಿರುವುದರಿಂದ ಕಾರ್ತಿ ಅವರನ್ನು ಇನ್ನೂ ಆರು ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು. ಸಿಬಿಐನ ಮನವಿಯನ್ನು ದೆಹಲಿ ನ್ಯಾಯಾಲಯ ಪುರಸ್ಕರಿಸಿದೆಯಾದರೂ ಕೇವಲ 3 ದಿನಗಳ ಕಾಲ ಮಾತ್ರ ಕಾರ್ತಿ ಅವರನ್ನು ಸಿಬಿಐ ವಶಕ್ಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


