ದೇಶ

ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣ ನಡೆಯುತ್ತಿದೆ: ಪ್ರಧಾನಿ ವಿರುದ್ಧ ಸೋನಿಯಾ ವಾಗ್ದಾಳಿ

ಎಐಸಿಸಿ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿದ ಮೇಲೆ ಸೋನಿಯಾ ಗಾಂಧಿ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ...

ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣ ನಡೆಯುತ್ತಿದೆ: ಪ್ರಧಾನಿ ವಿರುದ್ಧ ಸೋನಿಯಾ ವಾಗ್ದಾಳಿ
ಸೋನಿಯಾ ಗಾಂಧಿ
Published On :
ಮುಂಬಯಿ: ಎಐಸಿಸಿ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿದ ಮೇಲೆ ಸೋನಿಯಾ ಗಾಂಧಿ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. 
ಇಂಡಿಯಾ ಟುಡೇ  ಸಮಾವೇಶದಲ್ಲಿ ಮಾತನಾಡಿದ  ಅವರು, ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹರಣವಾಗುತ್ತಿದೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ, ಪ್ರತಿದಿನ ಭಯದಲ್ಲೇ ಬದುಕುವ ವಾತಾವರಣವಿದೆ, ಪ್ರತಿಭಟಿಸುವ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ಧಾರ್ಮಿಕ ಅಸಹಿಷ್ಣುತೆ ಹೆಚ್ಚುತ್ತಿದೆ,ಸಮಾಜ ಧ್ರುವೀಕರಣದತ್ತ ಸಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದೆ, ವಿರೋಧ ಪಕ್ಷಗಳು ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ದೂರಿದ್ದಾರೆ.
ಸಂಘಟನಾತ್ಮಕವಾಗಿ ಹೊಸ ಶೈಲಿಯಲ್ಲಿ ದೇಶದ ಅಭಿವೃದ್ಧಿ ಯಾಗಬೇಕೆಂದು ಕಾಂಗ್ರೆಸ್ ಬಯಸುತ್ತದೆ,  2004 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಯಾರು ಪಿಎಂ ಆಗಬೇಕೆಂಬ ಪ್ರಶ್ನೆ ಎದ್ದಿತ್ತು,  ಆದರೆ  ಮನಮೋಹನ್ ಸಿಂಗ್ ಅವರೇ ಸೂಕ್ತ ಎಂಬುದು ನನಗೆ ಎನ್ನಿಸಿತ್ತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.