ದೇಶ

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 3 ಜನರ ಸಾವು, ಐವರಿಗೆ ಗಾಯ

ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್'ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 3 ಜನರ ಸಾವು, ಐವರಿಗೆ ಗಾಯ
ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Published On :
ಪಾಲ್ಘಾನ್; ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್'ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ತಾರಾಪುರ್ ಎಂಐಡಿಸಿ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಾರ್ಖಾನೆಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ ಕಾರ್ಖಾನೆ ಹೊತ್ತುಉರಿದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿಯೇ ಇರುವ ಮತ್ತೆರಡು ಕಾರ್ಖಾನೆಗಳಿಗೂ ತಗುಲಿದೆ ಎಂದು ವರದಿಗಳು ತಿಳಿಸಿವೆ. 
ಘಟನೆ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಐವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 
ಘಟನೆ ಬಳಿಕ ಪಾಲ್ಘಾರ್ ಜಿಲ್ಲಾಧಿಕಾರಿ ಪ್ರಶಾಂತ್ ನರ್ನಾವಾರೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.