ಟಿಡಿಪಿ ಸಚಿವರ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ; ನಾಗರಿಕ ವಿಮಾನಯಾನ ಖಾತೆ ಪ್ರಧಾನಿ ತೆಕ್ಕೆಗೆ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್ ಡಿಎ ಮೈತ್ರಿಕೂಟಕ್ಕೆ ಗುಡ್ ಬೈ ಹೇಳಿರುವ ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ.

Published On :
ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್ ಡಿಎ ಮೈತ್ರಿಕೂಟಕ್ಕೆ ಗುಡ್ ಬೈ ಹೇಳಿರುವ ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ.
ಶುಕ್ರವಾರ ಪ್ರಧಾನಿ ಸಚಿವಾಲಯದ ಸಲಹೆ ಮೇರೆಗೆ ರಾಷ್ಟ್ರಪತಿ ಕೋವಿಂದ್ ಅವರು ಟಿಡಿಪಿ ಸಂಸದ ಮತ್ತು ಕೇಂದ್ರ ಸಚಿವರಾಗಿದ್ದ ಅಶೋಕ್ ಗಜಪತಿ ರಾಜು ಮತ್ತು ವೈಎಸ್ ಚೌದರಿ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ. ಅಶೋಕ್ ಗಜಪತಿರಾಜು ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿಯೂ ವೈಎಸ್ ಚೌದರಿ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಇದೀಗ ಈ ಇಬ್ಬರು ಸಚಿವರ ರಾಜಿನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ರಾಜಿನಾಮೆ ಅಂಗಿಕರಿಸಿದ್ದು, ಈ ಬಗ್ಗೆ ಶುಕ್ರವಾರ ರಾಷ್ಟ್ರಪತಿ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಇದೀಗ ಈ ಎರಡೂ ಸ್ಥಾನಗಳು ತೆರವಾಗಿದೆ. ತಾತ್ಕಾಲಿಕವಾಗಿ ನಾಗರಿಕ ವಿಮಾನಯಾನ ಇಲಾಖೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ನಿರ್ವಹಿಸಲಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಜವಾಬ್ದಾರಿಯನ್ನು ಇತರೆ ಸಚವರಿಗೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.\
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


