ದೇಶ

ನಿಯಮ ಉಲ್ಲಂಘಿಸಿದ ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ ಆರ್ ಬಿಐನಿಂದ 5 ಕೋಟಿ ರು. ದಂಡ

ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಮತ್ತು ಕೆವೈಸಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ...

ನಿಯಮ ಉಲ್ಲಂಘಿಸಿದ  ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ ಆರ್ ಬಿಐನಿಂದ 5 ಕೋಟಿ ರು. ದಂಡ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಮತ್ತು ಕೆವೈಸಿ ನಿಯಮಗಳನ್ನು ಉಲ್ಲಂಘಿಸಿದ ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಐದು ಕೋಟಿ ರುಪಾಯಿ ದಂಡ ವಿಧಿಸಿದೆ.
ಗ್ರಾಹಕರಿಂದ ಸೂಕ್ತ ಅನುಮತಿಯಿಲ್ಲದೆ ಏರ್‌ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಕುರಿತು ಪರಿಶೀಲನೆ ನಡೆಸಿದ ಬಳಿಕ ಆರ್ ಬಿಐ ಐದು ಕೋಟಿ ರುಪಾಯಿ ದಂಡ ವಿಧಿಸಿದೆ.
ಕೆವೈಸಿಗೆ ಸಂಬಂಧಿಸಿದಂತೆ ಕೇಂದ್ರೀಯ ಬ್ಯಾಂಕ್ ನೀಡಿದ್ದ ನಿರ್ದೇಶನಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್ 7ರಂದು ಆರ್ ಬಿಐ ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ 5 ಕೋಟಿ ರುಪಾಯಿ ದಂಡ ವಿಧಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
ಗ್ರಾಹಕರು ನೀಡಿದ ದೂರು ಮತ್ತು ಮಾಧ್ಯಮಗಳ ವರದಿಯನ್ನು ಆಧರಿಸಿ  ಏರ್‌ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗಳಿಗೆ ಗ್ರಾಹಕರ ಅನುಮತಿ ಇಲ್ಲದೆ 167 ಕೋಟಿ ಹಣ ವರ್ಗಾವಣೆ ಮಾಡಿದ ಕುರಿತು ಆರ್ ಬಿಐ ತನಿಖೆ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.