50 ಕೋಟಿ ರೂ. ಗಿಂತ ಹೆಚ್ಚು ಸಾಲ ಪಡೆದವರ ಪಾಸ್ ಪೋರ್ಟ್ ಮಾಹಿತಿ ಕಡ್ಡಾಯ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಇಂತಹ ವಂಚನೆ ಹಾಗೂ ವಂಚಕರು ದೇಶದಿಂದ ಬಿಟ್ಟು ಹೊರಗೆ ಹೋಗದಂತೆ ತಡೆಯಲು ಮುಂದಾಗಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಇಂತಹ ವಂಚನೆ ಹಾಗೂ ವಂಚಕರು ದೇಶದಿಂದ ಬಿಟ್ಟು ಹೊರಗೆ ಹೋಗದಂತೆ ತಡೆಯಲು ಮುಂದಾಗಿದೆ. 50 ಕೋಟಿ ಗೂ ಹೆಚ್ಚು ಸಾಲ ಪಡೆದವರ ಪಾರ್ಸ್ ಪೋರ್ಟ್ ಮಾಹಿತಿ ಕಡ್ಡಾಯಗೊಳಿಸಲಾಗಿದೆ .
ವಂಚಕರು ದೇಶ ಬಿಡುವ ಸಂದರ್ಭದಲ್ಲಿ ಸಂಬಂಧಿಸಿದ ಸಂಸ್ಥೆಗೆ ಮಾಹಿತಿ ತಿಳಿಸಲು ಹಾಗೂ ಬ್ಯಾಂಕುಗಳು ಆ ವೇಳೆಯಲ್ಲಿ ಕ್ರಮ ಕೈಗೊಳ್ಳಲು ಪಾಸ್ ಪೋರ್ಸ್ ಮಾಹಿತಿಯಿಂದ ನೆರವಾಗಲಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರವನ್ನು ಸ್ವಚ್ಛ ಮತ್ತು ಜವಾಬ್ದಾರಿಯುತವಾಗಿ ಮಾಡುವುದು ಮುಂದಿನ ಕ್ರಮವಾಗಿದೆ. 50 ಕೋಟಿ ಗೂ ಹೆಚ್ಚು ಸಾಲಕ್ಕೆ ಪಾಸ್ ಪೋರ್ಸ್ ಮಾಹಿತಿ ಅಗತ್ಯ.ಇದರಿಂದಾಗಿ ವಂಚನೆ ಪ್ರಕರಣಗಳಿಗೆ ಕ್ಷೀಪ್ರವಾಗಿ ಪ್ರತಿಕ್ರಿಯಿಸಬಹುದು ಎಂದು ಹಣಕಾಸು ಸೇವಾ ಕಾರ್ಯದರ್ಶಿ ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.
50 ಕೋಟಿ ಗೂ ಹೆಚ್ಚು ಸಾಲ ಪಡೆದವರ ಪಾಸ್ ಪೋರ್ಟ್ ಮಾಹಿತಿಯನ್ನು 45 ದಿನಗಳಲ್ಲಿ ಬ್ಯಾಂಕುಗಳು ಸಂಗ್ರಹಿಸುವಂತೆ ಅವರು ಸೂಚಿಸಿದ್ದಾರೆ. ಪಾಸ್ ಪೋರ್ಟ್ ಮಾಹಿತಿ ಇಲ್ಲದಿದ್ದರೆ. ದೇಶ ಬಿಟ್ಟು ಬೇರೆ ದೇಶಕ್ಕೆ ಪಲಾಯನ ಮಾಡುವ ವಂಚಕರ ವಿರುದ್ಧ ಬ್ಯಾಂಕುಗಳು ಸರಿಯಾಗಿ ಕ್ರಮಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಆಭರಣ ಉದ್ಯಮಿ ನೀರವ್ ಮೋದಿ ಹಾಗೂ ಆತನ ಸಂಬಂಧಿ ಮೆಹುಲ್ ಚೊಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ 12.700 ಕೋಟಿ ರೂ ವಂಚಿಸಿ ಪರಾರಿಯಾದ ಬಳಿಕ ವಸೂಲಾಗದ ಆರ್ಥಿಕ ವಂಚಕರ ಬಿಲ್ ಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಇಂತಹ ಪ್ರಕರಣಗಳಲ್ಲಿ ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದು ಈ ಕಾನೂನಿನ ಉದ್ದೇಶವಾಗಿದೆ.100 ಕ್ಕೂ ಹೆಚ್ಚು ಕೋಟಿ ವಂಚಿಸಿ ದೇಶ ತೊರೆಯುವವರೆಗೂ ಇದು ಅನ್ವಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


