ತಮಿಳುನಾಡು: ಥೇಣಿ ಕಾಡ್ಗಿಚ್ಚಿನಲ್ಲಿ ಸಿಲುಕಿದ 20 ವಿದ್ಯಾರ್ಥಿಗಳ ರಕ್ಷಣೆಗೆ ಐಎಎಫ್ ನೆರವು
ತಮಿಳುನಾಡಿನ ಥೇಣಿ ಅರಣ್ಯದಲ್ಲಿ ಭಾನುವಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡಿನಲ್ಲಿ ಸಿಲುಕಿರುವ 20 ವಿದ್ಯಾರ್ಥಿಗಳ....

Published On :
ಚೆನ್ನೈ: ತಮಿಳುನಾಡಿನ ಥೇಣಿ ಅರಣ್ಯದಲ್ಲಿ ಭಾನುವಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡಿನಲ್ಲಿ ಸಿಲುಕಿರುವ 20 ವಿದ್ಯಾರ್ಥಿಗಳ ರಕ್ಷಣೆಗೆ ಮತ್ತು ಸ್ಥಳಾಂತರಕ್ಕೆ ಭಾರತೀಯ ವಾಯು ಪಡೆ(ಐಎಎಫ್) ನೆರವು ಪಡೆಯಲಾಗಿದೆ.
ಕಾಡ್ಗಿಚ್ಚಿನಲ್ಲಿ ಸಿಲುಕಿದ 20 ವಿದ್ಯಾರ್ಥಿಗಳ ರಕ್ಷಣೆಗೆ ವಾಯು ಪಡೆಯ ವಿಮಾವ ರವಾನಿಸಲಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
ವಾಯು ಪಡೆಯ ದಕ್ಷಿಣ ಕಮಾಂಡ್ ಥೇಣಿ ಜಿಲ್ಲಾಧಿಕಾರಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಸೀತಾರಾಮನ್ ಅವರು ಹೇಳಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ಮನವಿಯಂತೆ ಕಾಡ್ಗಿಚ್ಚಿನಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಐಎಎಫ್ ನೆರವು ನೀಡಲಾಗಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.
ಹಲವು ವಿದ್ಯಾರ್ಥಿಗಳು ಚಾರಣಕ್ಕೆ ತೆರಳಿದ್ದ ವೇಳೆ ಥೇಣಿಯ ಕುರಂಕಣಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


