ದೆಹಲಿ ಸೀಲಿಂಗ್ ಡ್ರೈವ್: ಮಾ.13ಕ್ಕೆ ಸರ್ವಪಕ್ಷ ಸಭೆ ಕರೆದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಸೀಲಿಂಗ್ ಡ್ರೈವ್ ನಿಂದಾಗಿ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರ...

Published On :
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೀಲಿಂಗ್ ಡ್ರೈವ್ ನಿಂದಾಗಿ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರ ಕಂಡುಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾರ್ಚ್ 13ರಂದು ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಈ ಸಂಬಂಧ ದೆಹಲಿ ಬಿಜೆಪ ಮುಖ್ಯಸ್ಥ ಮನೋಜ್ ತಿವಾರಿ ಹಾಗೂ ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರಿಗೆ ದೆಹಲಿ ಸಿಎಂ ಪತ್ರ ಬರೆದಿದ್ದು, ನಾವು ರಾಜಕೀಯ ಮೀರಿ ಸೀಲಿಂಗ್ ನಿಂದ ಉದ್ಭವಿಸಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದಿದ್ದಾರೆ.
ಸರ್ವಪಕ್ಷ ಸಭೆ ಸುಗಮವಾಗಿ ನಡೆಯಲು ಪ್ರತಿಪಕ್ಷದಿಂದ ಮೂರಕ್ಕಿಂತ ಹೆಚ್ಚು ಜನ ಭಾಗವಹಿಸುವಂತಿಲ್ಲ ಎಂದು ಸಂದೇಶವನ್ನು ಪತ್ರದ ಮೂಲಕ ಪ್ರತಿಪಕ್ಷಗಳ ನಾಯಕರಿಗೆ ರವಾನಿಸಿದ್ದಾರೆ.
ಸೀಲಿಂಗ್ ಡ್ರೈವ್ ನಿಂದಾಗಿ ದೆಹಲಿ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಬಿಜೆಪಿ ನಿಯೋಗ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ ಎಎಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕಳೆದ ಜನವರಿಯಲ್ಲಿ ಪ್ರತಿಪಕ್ಷ ನಾಯಕ ವಿಜೇಂದ್ರ ಗುಪ್ತಾ ಅವರು ಆರೋಪಿಸಿದ್ದರು.
ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿ ಮೇಲ್ವಿಚಾರಣೆಯಲ್ಲಿ, ಕಳೆದ ವರ್ಷ ಡಿಸೆಂಬರ್ ನಿಂದ ವಾಣಿಜ್ಯ ಘಟಕಗಳ ವಿರುದ್ಧ ನಾಗರಿಕ ಸಂಸ್ಥೆಗಳು ಸೀಲಿಂಗ್ ಡ್ರೈವ್ ನಡೆಸುತ್ತಿವೆ. ದೆಹಲಿ ಮಾಸ್ಟರ್ ಪ್ಲ್ಯಾನ್ 2021 ರ ಉಲ್ಲಂಘನೆ ಮತ್ತು ವ್ಯಾಪಾರಿ ಶುಲ್ಕವನ್ನು ಪಾವತಿಸದೇ ಇರುವ ವ್ಯಾಪಾರಿಗಳ ಮೇಲೆ ವ್ಯಾಪಾರಿ ಘಟಕಗಳಿ ದಂಡ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್Arvind Kejriwalall-party meetingಸರ್ವಪಕ್ಷ ಸಭೆDelhi sealing driveದೆಹಲಿ ಸೀಲಿಂಗ್ ಡ್ರೈವ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


