ರಾಂಚಿ ರೈಲ್ವೇ ನಿಲ್ದಾಣದಲ್ಲಿ ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ
ಜಾರ್ಖಾಂಡ್ ರಾಜ್ಯದ ರಾಂಚಿ ರೈಲ್ವೇ ನಿಲ್ದಾಣದಲ್ಲಿ ಬಿಜೆಪಿ ನಾಯಕರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ...

Published On :
ರಾಂಚಿ: ಜಾರ್ಖಾಂಡ್ ರಾಜ್ಯದ ರಾಂಚಿ ರೈಲ್ವೇ ನಿಲ್ದಾಣದಲ್ಲಿ ಬಿಜೆಪಿ ನಾಯಕರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಲಹರ್ದಗ ಮೂಲದ ಬಿಜೆಪಿ ನಾಯಕ ಪಂಕಜ್ ಗುಪ್ತಾ ಎಂಬುವವರ ತಲೆಗೆ ಗುಂಡು ಹಾರಿಸಲಾಗಿತ್ತು, ಪಂಕಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ರಾಂಚಿಯ ಪಿಸ್ಕಾ ರೈಲ್ವೇ ನಿಲ್ದಾಣದಲ್ಲಿ ರೈಲಿನಿಂದ ಪಂಕಜ್ ಅವರು ಇಳಿದಿದ್ದಾರೆ. ಬೆಳಿಗ್ಗೆ 8.30ರ ಸುಮಾರಿಗೆ ರಾಮ್ಲಾಲ್ ಸ್ವೀಟ್ಸ್ ಬಳಿ ಪಂಕಜ್ ಅವರು ಬಂದಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ದುಷ್ಕರ್ಮಿಗಳು ಪಂಕಜ್ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಹತ್ಯೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಸಿದ ನೂರಾರು ಸಂಖ್ಯೆಯಲ್ಲಿದ್ದ ಜನರು ರೈಲ್ವೇ ನಿಲ್ದಾಣದ ರಸ್ತೆಗಳನ್ನು ತಡೆದು ಪ್ರತಿಭಟಿಸಲು ಆರಂಭಿಸಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಂತಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಪಂಕಜ್ ಗುಪ್ತಾ ಅವರು ಪಿಸ್ಕಾ ಬಳಿ ಭೂ ಪ್ರದೇಶವನ್ನು ಖರೀದಿ ಮಾಡಿದ್ದು, ಕಟ್ಟಡ ನಿರ್ಮಾಣ ಮಾಡುತ್ತಿರುವ ಹಿನ್ನಲೆಯಲ್ಲಿ ಆಗಾಗ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಭೂಮಿ ವಿವಾದದಿಂದಾಗಿ ಹತ್ಯೆ ನಡೆಸಲಾಗಿದೆ ಎಂಬ ಶಂಕೆಗಳು ವ್ಯಕ್ತವಾಗಿವೆ. ಹತ್ಯೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


