ಉತ್ತರಪ್ರದೇಶ: ತುಂಡಾಗಿದ್ದ ಅರ್ಧ ಕಾಲನ್ನೇ ರೋಗಿಯ ತಲೆ ಕೆಳಗೆ ಇಟ್ಟ ವೈದ್ಯ!
ಭೀಕರ ರಸ್ತೆ ಅಪಘಾತವೊಂದರಲ್ಲಿ ತುಂಡಾದ ಅರ್ಧ ಕಾಲನ್ನೇ ರೋಗಿಯ ತಲೆ ದಿಂಬುವಿನಂತೆ ಬಳಸಿರುವ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ...

Published On :
ಝಾನ್ಸಿ; ಭೀಕರ ರಸ್ತೆ ಅಪಘಾತವೊಂದರಲ್ಲಿ ತುಂಡಾದ ಅರ್ಧ ಕಾಲನ್ನೇ ರೋಗಿಯ ತಲೆ ದಿಂಬುವಿನಂತೆ ಬಳಸಿರುವ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬಮೌರಿ ಗ್ರಾಮದಲ್ಲಿ ನಿನ್ನೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಧ್ಯಾನ್ ಶ್ಯಾಮ್ ಎಂಬುವವರ ಕಾಲು ತುಂಡಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಧ್ಯಾನ್ ಶ್ಯಾಮ್ ಅವರನ್ನು ಉತ್ತರಪ್ರದೇಶದ ಝಾನ್ಸಿಯ ಸರ್ಕಾರಿ ಮಹಾರಾಣಿ ಲಕ್ಷ್ಮೀಭಾಯಿ ವೈದ್ಯಕೀಯ ಕಾಲೇಜಿಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ನೀಡಲು ಬಂದ ವೈದ್ಯರು ಅರ್ಧಕಾಲಿನ ತುಂಡನ್ನೇ ಆತನ ತಲೆಯ ಕೆಳಗೆ ದಿಂಬುವಿನಂತೆ ಇಟ್ಟಿದ್ದರು ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮಹಾರಾಣಿ ಲಕ್ಷ್ಮಿ ಭಾಯಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆ ಸಾಧ್ನ ಕೌಶಿಕ್ ಅವರು ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಪ್ರಕರಣ ಸಂಬಂಧ ಇದೀಗ ನಾಲ್ಕು ಸದಸ್ಯರ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಸಮಿತಿಯಿಂದ ವರದಿ ಬಂದ ನಂತರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶAccident victimಅಪಘಾತ ಸಂತ್ರಸ್ತSevered legPillowJhansi hospitalತುಂಡಾದ ಕಾಲುತಲೆ ದಿಂಬುಝಾನ್ಸಿ ಆಸ್ಪತ್ರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


