ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ನ್ಯಾಯಾಂಗ ಬಂಧನ ಅವಧಿ ಮಾ. 24ರವರೆಗೆ ವಿಸ್ತರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಅನಿಂಡ ಬಂಧಿಸಲಾಗಿದ್ದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ...

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ನ್ಯಾಯಾಂಗ ಬಂಧನ ಅವಧಿ ಮಾ. 24ರವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಅನಿಂಡ ಬಂಧಿಸಲಾಗಿದ್ದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾರ್ತಿ ಪರ ವಕೀಲರು ಕಾರ್ತಿ ಚಿದಂಬರಂ ಅವರಿಗೆ ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಸೆಲ್ ಕೋರಿ ಮನವಿ ಸಲ್ಲಿಸಿದ್ದು ಇದಕ್ಕೆ ನ್ಯಾಯಾಲಯವು ಕಾರ್ತಿ ಅವರು ಜೈಲು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುವುದು ಎಂದಿದ್ದಾರೆ
ಹಾಗೆಯೇ ಕಾರ್ತಿ ಅವರ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ತೆಗೆದುಕೊಳ್ಳುವ ಸಂಬಂಧ ನ್ಯಾಯಾಲಯ ಜಾಮೀನು ಅರ್ಜಿಯನ್ನು ಈ ಹಿಂದೆ ನಿಗದಿಗೊಂಡಂತೆ ಮಾ.15ರಂದು ವಿಚಾರಣೆ ನಡೆಸಲಾಗುತ್ತದೆ ಎಂದಿದೆ. ಅಲ್ಲದೆ ಕಾರ್ತಿ ಅವರಿಗೆ ಜೈಲು ವಾಸದ ಸಮಯದಲ್ಲಿ ಮನೆಯ ಆಹಾರ ನೀಡಬೇಕೆನ್ನುವ ಕೋರಿಕೆಯನ್ನು ನ್ಯಾಯಾಲಯ ನಿರಾಕರಿಸಿದೆ. 
ಇದಕ್ಕೂ ಮುನ್ನ ಕಾರ್ತಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸುನೀಲ್ ರಾಣಾ ಅವರೆದುರು ಹಾಜರುಪಡಿಸಲಾಗಿತ್ತು.
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಅವರನ್ನು  ಫೆಬ್ರವರಿ 28ರಂದು ಚೆನ್ನೈ ವಿಮಾನ ನಿಲ್ದಾನದಲ್ಲಿ ಸಿಬಿಐ ವಶಕ್ಕೆ ಪಡೆದಿತ್ತು. ಅಂದಿನಿಂದಲೂ ಅವರು ಸಿಬಿಐ ವಶದಲ್ಲಿ ವಿಚಾರಣೆಗೆ ಒಳಪಟ್ಟಿದ್ದಾರೆ.
ಕಾರ್ತಿ ಚಿದಂಬರಂ ಅವರ ವಿಚಾರಣೆ ವೇಳೆ ಅವರ ತಂದೆ ಪಿ. ಚಿದಂಬರಂ ಅವರೂ ಸಹ ನ್ಯಾಯಾಲಯದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.