ದೇಶ

ಮಹಾರಾಷ್ಟ್ರ ರೈತರ ಬಹುತೇಕ ಬೇಡಿಕೆ ಈಡೇರಿಸಲು ಫಡ್ನಾವಿಸ್ ಸರ್ಕಾರ ಒಪ್ಪಿಗೆ, ಪ್ರತಿಭಟನೆ ಅಂತ್ಯ

ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರೈತರ ಬೃಹತ್‌ ಪ್ರತಿಭಟನೆ ಅಂತ್ಯವಾಗಿದೆ.

ಮಹಾರಾಷ್ಟ್ರ ರೈತರ ಬಹುತೇಕ ಬೇಡಿಕೆ ಈಡೇರಿಸಲು ಫಡ್ನಾವಿಸ್ ಸರ್ಕಾರ ಒಪ್ಪಿಗೆ, ಪ್ರತಿಭಟನೆ ಅಂತ್ಯ
ಮಹಾರಾಷ್ಟ್ರ ರೈತರ ಬಹುತೇಕ ಬೇಡಿಕೆ ಈಡೇರಿಸಲು ಫಡ್ನಾವಿಸ್ ಸರ್ಕಾರ ಒಪ್ಪಿಗೆ, ಪ್ರತಿಭಟನೆ ಅಂತ್ಯ
Published On :
ಮುಂಬೈ: ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರೈತರ ಬೃಹತ್‌ ಪ್ರತಿಭಟನೆ ಅಂತ್ಯವಾಗಿದೆ. 
ಪ್ರತಿಭಟನಾಕಾರರಿಗೆ ಮಣಿದ ಮಹಾರಾಷ್ಟ್ರ ಸರ್ಕಾರ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಆಜಾದ್‌ ಮೈದಾನದಲ್ಲಿ ಸೇರಿದ್ದ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾತ್‌ ಪಾಟೀಲ್‌ ಮಾತನಾಡಿದ್ದು ಸರ್ಕಾರ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.
ರೈತರ ಹೆಸರಿಗೆ ಅರಣ್ಯ ಭೂಮಿ ಹಂಚಿಕೆ ಪ್ರಕ್ರಿಕೆ ಪೂರ್ಣಗೊಳಿಸುವುದಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವ ಪಾಟೀಲ್‌  ಹೇಳಿದ್ದಾರೆ.
ಮುಖ್ಯಮಂತ್ರಿಗಳ ಲಿಖಿತ ಸಂದೇಶ ಜತೆಗೆ ಸಚಿವರ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.