ದೇಶ

ತಮಿಳುನಾಡು: ಕುರಂಕಣಿ ಬೆಟ್ಟದಲ್ಲಿ ಕಾಡ್ಗಿಚ್ಚು; 9 ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಅಂತ್ಯ

ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಚಾರಣಕ್ಕೆ ಹೋಗಿದ್ದ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಸದ್ಯ ಮುಕ್ತಾಯಗೊಂಡಿದೆ...

ತಮಿಳುನಾಡು: ಕುರಂಕಣಿ ಬೆಟ್ಟದಲ್ಲಿ ಕಾಡ್ಗಿಚ್ಚು; 9 ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಅಂತ್ಯ
ಕಾರ್ಯಾಚರಣೆ
Published On :
ಚೆನ್ನೈ: ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಚಾರಣಕ್ಕೆ ಹೋಗಿದ್ದ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಸದ್ಯ ಮುಕ್ತಾಯಗೊಂಡಿದೆ. 
ಕೇರಳದ ಸೂರ್ಯನೆಲ್ಲಿ ಮೂಲದ 40 ವಿದ್ಯಾರ್ಥಿಗಳು ಕುರಂಕಣಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿದ್ದರು. ಆದರೆ ಅಲ್ಲಿ ಸಂಭವಿಸಿದ ಕಾಡ್ಗಿಚ್ಚಿನಲ್ಲಿ ಸಿಲುಕಿದ್ದು ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸಿಲುಕಿದ್ದರಿಂದ ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ರಕ್ಷಣೆಗಾಗಿ ಭಾರತೀಯ ವಾಯುಪಡೆ ವೈಮಾನಿಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ರಕ್ಷಣೆ ಮಾಡಿದ್ದಾರೆ. ಇನ್ನು ಕಾಡ್ಗಿಚ್ಚಿಗೆ ಸಿಲುಕಿ ಗಂಭೀರ ಸುಟ್ಟು ಗಾಯಗಳಾಗಿದ್ದವರನ್ನು ರಕ್ಷಿಸಿ ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಾಣಾಪಾಯದಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣಾ ಪಡೆಗಳು ರಕ್ಷಣೆ ಮಾಡಿದ್ದು, ಸುಟ್ಟ ಗಾಯಗಳಿಂದ ಬಳಲುತ್ತಿದ್ದ 10 ಮಂದಿಯನ್ನು ಮದುರೈ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ಮಂದಿಯನ್ನು ಮದುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲು ಮಾಡಿದ್ದರೆ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 10 ಮಂದಿಯ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 
ಇನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ರಾಜ್ಯ ಆರೋಗ್ಯ ಸಚಿವ ಸಿ ವಿಜಯ ಭಾಸ್ಕರ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಲಿದ್ದಾರೆ. 
ಕಾಡ್ಗಿಚ್ಚನ್ನು ನಂದಿಸುವ ಸಲುವಾಗಿ ಐಎಎಫ್ ಕಮಾಂಡೋಗಳು ಮೂರು ಚಾಪರ್ ಗಳನ್ನು ಬಳಸಿಕೊಂಡು ರಾಸಾಯನಿಕ ಪದಾರ್ಥಗಳನ್ನು ಸಿಂಪಡಿಸಿದರು. ಇದರಿಂದಾಗಿ ಕಾಡ್ಗಿಚ್ಚಿನಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಸಹಾಯವಾಯಿತು ಎಂದು ಥೇಣಿ ಎಸ್ ಪಿ ಹೇಳಿದ್ದಾರೆ. 
ಕುರಂಕಣಿ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ 9 ಮಂದಿ ವಿದ್ಯಾರ್ಥಿಗಳು ಸಜೀವ ದಹನವಾಗಿದ್ದು ಅವರ ಮೃತದೇಹಗಳನ್ನು ಐಎಎಫ್ ಕಮಾಂಡೋಗಳು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.