ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ: ಬೆಂಗಳೂರಿನ ಐವರ ದುರ್ಮರಣ
ಕೆಎಸ್ಆರ್ಟಿಸಿ ಬಸ್, ಲಾರಿ ಮತ್ತು ಮಾರುತಿ ಇಕೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಐವರು ದಾರುಣ ಸಾವನ್ನಪ್ಪಿರುವ ಘಟನೆ ಕೃಷ್ಣಗಿರಿಯಲ್ಲಿ ಸಂಭವಿಸಿದೆ.

Published On :
ಸೂಳಗಿರಿ(ತಮಿಳುನಾಡು): ಕೆಎಸ್ಆರ್ಟಿಸಿ ಬಸ್, ಲಾರಿ ಮತ್ತು ಮಾರುತಿ ಇಕೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಐವರು ದಾರುಣ ಸಾವನ್ನಪ್ಪಿರುವ ಘಟನೆ ಕೃಷ್ಣಗಿರಿಯಲ್ಲಿ ಸಂಭವಿಸಿದೆ.
ಕೃಷ್ಣಗಿರಿ ಜಿಲ್ಲೆಯ ಸೂಳಗಿರಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಮೃತರು ಸುಮತಿ(45), ಶಂಕರ್(50), ಸುಮತಿ, ಮಣಿ ಮತ್ತು ಕುಬೇರನ್ ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ 45 ವರ್ಷದ ಆನಂದ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೃಷ್ಣಗಿರಿ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಚೆನ್ನೈನ ಸಂಬಂಧಿಕರ ಮನೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಮತ್ತು ಮಾರುತಿ ಇಕೋ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಇನ್ನು ಬಸ್ ನಲ್ಲಿದ್ದ 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


