ದೇಶ

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ರಾಜೀನಾಮೆ

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಲಹೆಗಾರ ವಿ.ಕೆ. ಜೈನ್...

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ರಾಜೀನಾಮೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
Published On :
ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಲಹೆಗಾರ ವಿ.ಕೆ. ಜೈನ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ವೈಯಕ್ತಿಕ ಕಾರಣಗಳಿಂದ ಹಾಗೂ ಕುಟುಂಬದ ಕೆಲ ಸಮಸ್ಯೆಗಳಿಂದಾಗಿ ದೆಹಲಿ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡುತ್ತಿರುವುದಾಗಿ ಜೈನ್ ಅವರು ಹೇಳಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. 
ದೆಹಲಿ ಮುಖ್ಯಮಂತ್ರಿಗಳ ಕಚೇರಿಗೆ ಜೈನ್ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು, ರಾಜೀನಾಮೆ ಪತ್ರದ ಪ್ರತಿಯನ್ನು ರಾಜ್ಯಪಾಲರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. 
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಜೈನ್ ಅವರನ್ನು ದೆಹಲಿ ಮುಖ್ಯಮಂತ್ರಿಗಳ ಸಲಹೆಗಾರನಾಗಿ ನೇಮಕ ಮಾಡಲಾಗಿತ್ತು. 
ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ ಬಳಿಕ ಮುಖ್ಯಮಂತ್ರಿಗಳ ಕಚೇರಿಗೆ ಜೈನ್ ಅವರು ಬರುತ್ತಿರಲಿಲ್ಲ ಎಂದು ಹೇಳಲಾಗುತ್ತಿತ್ತು. ಹಲ್ಲೆ ಪ್ರಕರಣದ ಬಳಿಕ ಜೈನ್ ಅವರು ವಾರಗಳ ಕಾಲ ವೈದ್ಯಕೀಯ ರಜೆಯನ್ನು ಪಡೆದುಕೊಂಡಿದ್ದರು. 
ಫೆ.17 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯಕಾರ್ಶಿ ಮೇಲೆ ಹಲ್ಲೆ ನಡೆಸಿದ್ದರು. 
ಈ ಘಟನೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಅಲ್ಲದೆ, ಅರವಿಂದ ಕೇಜ್ರಿವಾಲ್ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಪ್ರಕರಣಕ್ಕೆ ಸಂಬಂಧಸಿದಂತೆ ಪೊಲೀಸರು ಕೇಜ್ರಿವಾಲ್ ಅವರ ಸಲಹೆಗಾರನಾಗಿದ್ದ ಜೈನ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಆಪ್ ಶಾಸಕರಾದ ಪ್ರಕಾಶ್ ಜರ್ವಾಲ್ ಹಾಗೂ ಅಮಾನುತುಲ್ಲಾ ಖಾನ್ ಅವರು ಮುಖ್ಯ ಕಾರ್ಯದರ್ಶಿಗಳನ್ನು ಸುತ್ತುವರೆದಿದ್ದರು. ಕೇಜ್ರಿವಾಲ್ ಅವರ ನಿವಾಸದಲ್ಲಿಯೇ ಮುಖ್ಯಕಾರ್ಯದರ್ಶಿಗಳ ಮೇಲೆ ಹಲ್ಲೆ ನಡೆಸುತ್ತಿದ್ದುದ್ದನ್ನು ನಾನು ನೋಡಿದ್ದೆ ಎಂದು ಹೇಳಿಕೊಂಡಿದ್ದರು. 
ಪೊಲೀಸರ ವಿಚಾರಣೆಗೂ ಮುನ್ನ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಜೈನ್ ಅವರು, ಘಟನೆ ನಡೆದಾಗ ನಾನು ಶೌಚಾಲಯಕ್ಕೆ ಹೋಗಿದ್ದೆ ಹೀಗಾಗಿ ನಾನು ಯಾವುದನ್ನು ನೋಡಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.