ನೀರವ್ ಮೋದಿ, ಮೆಹುಲ್ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಗೆ ಇಡಿ ಮನವಿ
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 12,700 ಕೋಟಿ ರುಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದ ವ್ಯಾಪಾರಿ...

Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 12,700 ಕೋಟಿ ರುಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಅವರ ಅಂಕಲ್, ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಇಂಟರ್ ಪೋಲ್ ಗೆ ಮನವಿ ಮಾಡಿದೆ.
ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಕೋರ್ಟ್ ಈಗಾಗಲೇ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದು, ಇದನ್ನು ಆದರಿಸಿ ರೆಡ್ ಕಾರ್ನರ್ ನೋಟಿಸ್ ಗೆ ಮನವಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿ ಹಾಗೂ ಜೋಕ್ಸಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ ಸಿಬಿಐ ಮೂಲಕ ಇಂಟರ್ ಪೋಲ್ ಗೆ ಮನವಿ ಸಲ್ಲಿಸಿದೆ.
ಸಿಬಿಐ ಸಹ ಈಗಾಗಲೇ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯInterpolಇಂಟರ್ ಪೋಲ್Nirav Modiನೀರವ್ ಮೋದಿMehul Choksiಮೆಹುಲ್ ಜೋಕ್ಸಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


