ಅಖಿಲೇಶ್ ಯಾದವ್, ಮಾಯಾವತಿಗೆ ಗೆಲುವಿನ ಶ್ರೇಯಸ್ಸು - ವಿಜೇತ ಅಭ್ಯರ್ಥಿ
ಫಲ್ಪುರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಸಿಂಗ್ ಪಾಟೀಲ್ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತರ ಪ್ರದೇಶ : ಫಲ್ಪುರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಸಿಂಗ್ ಪಾಟೀಲ್ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಈ ಕ್ಷೇತ್ರದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ನಾಗೇಂದ್ರ ಪಾಟೀಲ್ ಸಿಂಗ್ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.
ಸಮಾಜವಾದಿ ಪಕ್ಷದ ಮಾಜಿ ಮುಖ್ಯಮಂತ್ರಿ ಅಖಿಲೇಖ್ ಯಾದವ್ ಹಾಗೂ ಬಿಎಸ್ಪಿಯ ಅಧಿನಾಯಕಿ ಮಾಯಾವತಿ ಅವರ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದು, ಎಲ್ಲ ಶ್ರೇಯಸ್ಸು ಅವರಿಗೆ ಸಲ್ಲಬೇಕೆಂದು ಅವರು ತಿಳಿಸಿದ್ದಾರೆ.
ಸಮಾನ ಮನಸ್ಕ ಪಕ್ಷಗಳ ಮೈತ್ರಿಯಿಂದಾಗಿ ಈ ವಿಜಯ ಸಾಧಿಸಲಾಗಿದ್ದು , ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಹಾಗೂ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು ಫಲ್ಪುರ್ ಹಾಗೂ ಗೋರಖ್ ಪುರ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


