ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ: ಇದು ಅಂತ್ಯದ ಆರಂಭ ಎಂದ ಮಮತಾ
ಉತ್ತರ ಪ್ರದೇಶ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನೆಡೆ ಅನುಭವಿಸಿದ್ದು, ಈ ಕುರಿತು ಟ್ವೀಟ್...

Published On :
ಕೋಲ್ಕತಾ: ಉತ್ತರ ಪ್ರದೇಶ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನೆಡೆ ಅನುಭವಿಸಿದ್ದು, ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಅಂತ್ಯ ಈಗ ಆರಂಭವಾಗಿದೆ ಎಂದಿದ್ದಾರೆ.
'ದೊಡ್ಡ ಗೆಲುವು, ಅಭಿನಂದನೆಗಳು ಮಾಯಾವತಿ ಜಿ ಮತ್ತು ಅಖಿಲೇಶ್ ಯಾದವ್ ಜಿ. ಅಂತ್ಯ ಆರಂಭವಾಗಿದೆ' ಎಂದು ಪಶ್ಚಿಮ ಬಂಗಾಳ ಸಿಎಂ ಟ್ಟೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಲ್ಲೂ ಆಡಳಿತರೂಢ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಐದು ಬಾರಿ ಪ್ರತಿನಿಧಿಸಿದ್ದ ಗೋರಖ್ ಪುರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಕುಮಾರ್ ನಿಶಾದ್ ಅವರು 17ನೇ ಸುತ್ತಿನಲ್ಲೂ 26,960 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಉಪೇಂದ್ರ ದತ್ ಶುಕ್ಲಾ ಅವರು ಎರಡನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


