ಕಳೆದ ವರ್ಷ ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೋಮುಗಲಭೆ
ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ...

Published On :
ನವದೆಹಲಿ: ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಲು ಕೋಮುಗಲಭೆ ಪ್ರಮುಖ ಕಾರಣವಾಗಿರಬಹುದು.
ಕಳೆದ ವರ್ಷ ಅತಿ ಹೆಚ್ಚು ಕೋಮುಗಲಭೆ ನಡೆದ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ ಎಂದು ಬುಧವಾರ ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
2017ರಲ್ಲಿ ದೇಶದಲ್ಲಿ ಒಟ್ಟು 822 ಕೋಮುಗಲಭೆಗಳು ನಡೆದಿದ್ದು, 2016ರಲ್ಲಿ 703 ಹಾಗೂ 2015ರಲ್ಲಿ 751 ಕೋಮು ಗಲಭೆಗಳು ನಡೆದಿವೆ.
ಅತಿ ಹೆಚ್ಚು ಕೋಮು ಗಲಭೆಗಳು ನಡೆದ ರಾಜ್ಯಗಳ ಪೈಕಿ ಉತ್ತರ ಪ್ರದೇಶ(195) ಮೊದಲ ಸ್ಥಾನ, ಕರ್ನಾಟಕ(100) ಎರಡನೇ ಸ್ಥಾನ, ರಾಜಸ್ಥಾನ(91) ಮೂರನೇ ಸ್ಥಾನ, ಬಿಹಾರ(85) ನಾಲ್ಕನೆ ಸ್ಥಾನ ಹಾಗೂ ಮಧ್ಯಪ್ರದೇಶ(63) ಐದನೇ ಸ್ಥಾನ ಪಡೆದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಇಂದು ಲೋಕಸಭೆಗೆ ತಿಳಿಸಿದ್ದಾರೆ.
2016ರಲ್ಲೂ ಉತ್ತರ ಪ್ರದೇಶದಲ್ಲೂ ಅತಿ ಹೆಚ್ಚು ಕೋಮು ಗಲಭೆಗಳು ಸಂಭವಿಸಿದ್ದು, ಕರ್ನಾಟಕ ಎರಡನೇ ಸ್ಥಾನದಲಿದೆ. ಮಹಾರಾಷ್ಟ್ರ, ಬಿಹಾರ ಮತ್ತು ರಾಜಸ್ಥಾನ ನಂತರದ ಸ್ಥಾನಗಳಲ್ಲಿದ್ದವು ಎಂದು ಅಹಿರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


