ಉಪ ಚುನಾವಣೆ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಬಿಹಾರದಲ್ಲಿ ಆರ್'ಜೆಡಿಮುನ್ನಡೆ
ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ನಜೆದ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭಗೊಂಡಿದ್ದು, ಉತ್ತರಪ್ರದೇಶದ ಗೋರಖ್ಪುರದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಿಹಾರ ರಾಜ್ಯದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದೆ.

Published On :
ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ನಜೆದ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭಗೊಂಡಿದ್ದು, ಉತ್ತರಪ್ರದೇಶದ ಗೋರಖ್ಪುರದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದ್ದರೆ, ಬಿಹಾರ ರಾಜ್ಯದ ಅರಾರಿಯಾ ಲೋಕಸಭಾ ಕ್ಷೇತ್ರದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಂದ ತೆರವಾಗಿರುವ ಗೋರಖ್ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಅವರು ಬಿಜೆಪಿಯ ಉಪೇಂದ್ರ ದತ್ತ ಶುಕ್ಲಾ ವಿರುದ್ಧ ಮುನ್ನಡೆಯುತ್ತಿದ್ದಾರೆ.
ಉಪ ಮುಖ್ಯಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ತೆರವಾಗಿದ್ದ ಫುಲ್ಪುರ ಕ್ಷೇತ್ರದಲ್ಲಿ
ಬಿಜೆಪಿಯ ಕೌಶಲೇಂದ್ರ ಸಿಂಗ್ ವಿರುದ್ಧ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಪ್ರತಾಪ್ ಅವರು ಸ್ಪರ್ಧೆ ನಡೆಸುತ್ತಿದ್ದಾರೆ.
ಬಿಹಾರ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಗತಿಯಲ್ಲಿದೆ. ಆಡಳಿತಾರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್'ಜೆಡಿ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಬಿಹಾರದ ಅರೆರಿಯಾ ಲೋಕಸಭಾ ಕ್ಷೇತ್ರದ ಮತ್ತು ಜೆಹಾನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದ್ದು, ಭಬುವಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿBiharUttar pradeshಬಿಹಾರಮತ ಎಣಿಕೆಉಪ ಚುನಾವಣೆVote countingGorakhpurbypollPhulpur. ಉತ್ತರಪ್ರದೇಶಗೋರಖ್ಪುರಫುಲ್ಪುರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


