ಉಪಚುನಾವಣೆಯಲ್ಲಿ ಬಿಜೆಪಿ ಸೋಲು: ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ...

Published On :
ನವದೆಹಲಿ: ಉತ್ತರ ಪ್ರದೇಶದ ಎರಡು ನಿರ್ಣಾಯಕ ಸಂಸದೀಯ ಕ್ಷೇತ್ರಗಳಾದ ಗೋರಖ್‌ಪುರ ಮತ್ತು ಫೂಲ್‌ಪುರ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಸಫಲವಾಗಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ವಿರೋಧಿ ರಂಗವನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ನಾಯಕರನ್ನು ತಲುಪುವ ಯತ್ನವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.
ಇನ್ನೂ ನಿನ್ನೆ ನಡೆದ ಸಭೆಯಲ್ಲಿ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಕೂಡ ಹಾಜರಿದ್ದರು.
ರಾಹುಲ್ ಗಾಂಧಿ ಈಗಿನ್ನು ಈ ವಿಷಯದಲ್ಲಿ ಇದೇ ಮಾರ್ಚ್ 28ರಂದು ದೆಹಲಿಗೆ ಭೇಟಿ ನೀಡಲಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಬಲಿಷ್ಠವಾದ ಮೈತ್ರಿಕೂಟವನ್ನು ರಚಿಸುವ ಅಗತ್ಯವಿದೆ ಎಂಬುದನ್ನು ರಾಹುಲ್, ಮಮತಾ ಬ್ಯಾನರ್ಜಿಗೆ ಮನವರಿಕೆ ಮಾಡಲಿದ್ದಾರೆ.
ಇತ್ತೀಚೆಗಷ್ಟೆ ಸೋನಿಯಾ ಗಾದಿ ವಿರೋಧ ಪಕ್ಷಗಳ ನಾಯಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಭೋಜನ ಕೂಟವನ್ನು ಏರ್ಪಡಿಸಿದ್ದರು. ಅದರಲ್ಲಿ 20 ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.
ಇನ್ನೂ ಮಹಾರಾಷ್ಟ್ರದಲ್ಲಿ ಕೂಡ ಬಿಜೆಪಿಗೆ ಕಠಿಣ ಸಮಸ್ಯೆಯಿದೆ. ಸದ್ಯ ಸರ್ಕಾರಕ್ಕೆ ಬೆಂಬಲ ನೀಡಿರುವ ಶಿವಸೇನೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sharad PawarUttar pradeshRahul Gandhiರಾಹುಲ್ ಗಾಂಧಿಲೋಕಸಭೆ ಚುನಾವಣೆParliament electionಶರದ್ ಪವಾರ್ ಉತ್ತರ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


