ಆರ್ಜೆಡಿ ಗೆಲುವು: ಅರಾರಿಯಾ ಕ್ಷೇತ್ರ ಭಯೋತ್ಪಾದನೆಯ ಕೇಂದ್ರವಾಗಲಿದೆ- ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಆರ್ ಜೆಡಿಯ ಸರ್ಫರಾಜ್ ಅಲ್ಮಾ ಅವರ ಗೆಲುವು ಅರಾರಿಯಾ ಲೋಕಸಭೆ ಕ್ಷೇತ್ರವನ್ನು ಭಯೋತ್ಪಾದನೆಯ...

ನವದೆಹಲಿ: ಆರ್ ಜೆಡಿಯ ಸರ್ಫರಾಜ್ ಅಲ್ಮಾ ಅವರ ಗೆಲುವು ಅರಾರಿಯಾ ಲೋಕಸಭೆ ಕ್ಷೇತ್ರವನ್ನು ಭಯೋತ್ಪಾದನೆಯ ನೆಲೆಯನ್ನಾಗಿ ಪರಿವರ್ತಿಸಲಿದೆ. ಅದು ಬಿಹಾರಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಅಪಾಯ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಗಿರಿರಾಜ್ ಸಿಂಗ್ ಅವರ ಈ ವಿವಾದಾತ್ಮಕ ಹೇಳಿಕೆಗೆ ವಿರೋಧ ಪಕ್ಷಗಳಿಂದ ಭಾರೀ ಟೀಕೆಗಳು ವ್ಯಕ್ತವಾಗಿದೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರತಿಕ್ರಿಯಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದ ಮೇಲೆ ನಂಬಿಕೆಯಿಲ್ಲದಿದ್ದರೆ ಅವರಿಂದ ಬಿಜೆಪಿ ಕೂಡಲೇ ಬೆಂಬಲವನ್ನು ಹಿಂತೆಗೆದುಕೊಳ್ಳಬೇಕು ಎಂದು ಹೇಳಿದರು.
ಬಿಹಾರದ ಅರಾರಿಯಾ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ನಂತರ ಪ್ರತಿಕ್ರಿಯೆ ನೀಡಿದ ಗಿರಿರಾಜ್ ಸಿಂಗ್, ಆರ್ ಜೆಡಿ ತನ್ನ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು "ಉಗ್ರಗಾಮಿ ಸಿದ್ಧಾಂತಗಳನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.
ತನ್ನ ರಾಜಕೀಯ ಮಹಾತ್ವಾಕಾಂಕ್ಷೆಗಾಗಿ ಆರ್ ಜೆಡಿ ಹೊಸ ರಾಜಕೀಯ ಸಂಸ್ಕೃತಿಯನ್ನು ಆರಂಭಿಸಿದೆ. ಉಗ್ರಗಾಮಿ ಸಿದ್ಧಾಂತವನ್ನು ಅನುಸರಿಸುತ್ತಿದ್ದು ಅದು ಬಿಹಾರಕ್ಕೆ ಮಾತ್ರವಲ್ಲ ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಅಪಾಯಕಾರಿ. ಅರಾರಿಯಾ ಕ್ಷೇತ್ರ ಭಯೋತ್ಪಾದನೆಯ ತಾಣವಾಗಲಿದೆ ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಹಿಂದುತ್ವದ ತತ್ವ, ಸಿದ್ಧಾಂತಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಗಿರಿರಾಜ್ ಸಿಂಗ್ ಈ ಹಿಂದೆ ಕೂಡ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


