ಹೃಷಿಕೇಶದಲ್ಲಿ ಸೂಪರ್ ಸ್ಟಾರ್: ಸಾಧು ಸಂತರಿಗೆ ಭೋಜನ ವ್ಯವಸ್ಥೆ ಮಾಡಿದ ರಜನಿ
ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ....

Published On :
ನವದೆಹಲಿ: ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ.
ಪ್ರತಿ ವರ್ಷ ಅಧಾತ್ಮ ಪ್ರವಾಸ ಕೈಗೊಳ್ಳುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಈ ವರ್ಷವೂ ಉತ್ತರ ಭಾರತದ ಕೆಲವೆಡೆ ಪ್ರವಾಸ ಆರಂಭಿಸಿದ್ದು, ಮಂಗಳವಾರ ಉತ್ತರಾಖಂಡದ ಆಶ್ರಮಕ್ಕೆ ತೆರಳಿದ್ದರು.
ಉತ್ತರಾಖಂಡದ ಸ್ವಾಮಿ ದಯಾನಂದ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದ ರಜನಿಕಾಂತ್, ಅವರಿಗಾಗಿ ಹೊರಗೆ ಕಾದು ನಿಂತಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ತಾವು ಅಧ್ಯಾತ್ಮ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ವರ್ಷದ ಆರಂಭದಲ್ಲಿ ರಜನೀಕಾಂತ್ ರಾಜಕೀಯ ಪ್ರವೇಶಿಸಲಿದ್ದು, ಹೊಸ ಪಕ್ಷ ಕಟ್ಟುವ ಘೋಷಣೆ ಮಾಡುವುದಾಗಿ ಹೇಳಿದ್ದರು, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ತಮಿಳುನಾಡಿನ 234 ವಿಧಾನಾಸಭೆ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದರು, ಆದರೆ ಇದುವರೆಗೂ ರಜನೀಕಾಂತ್ ತಮ್ಮ ಪಕ್ಷದ ಹೆಸರನ್ನು ಘೋಷಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rajinikanthರಜನೀಕಾಂತ್Rishikeshspiritual pilgrimageSwami Dayananda Ashramಹ-ಷಿಕೇಶಆದ್ಯಾತ್ಮ ಪ್ರವಾಸದಯಾನಂದ ಸ್ವಾಮಿ ಆಶ್ರಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


