ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಬಲ್ಹಮದ ಬಿಜೆಪಿ ನಾಯಕ ಅನ್ವರ್ ಖಾನ್ ಅವರನ್ನು ಹತ್ಯೆ ಮಾಡಲು ಉಗ್ರರು ಯತ್ನ ನಡೆಸಿದ್ದರು. ಈ ವೇಳೆ ಅನ್ವರ್ ಖಾನ್ ಅವರ ಭದ್ರತಾ ಸಿಬ್ಬಂದಿಗಳ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಳ್ಳಲು ಯತ್ನ ನಡೆಸಿದ್ದಾರೆ. ಈ ವೇಳೆ ಅನ್ವರ್ ಖಾನ್ ಅವರ ಭದ್ರತಾ ಸಿಬ್ಬಂದಿ ಬಿಲಾಲ್ ಅಹ್ಮದ್ ಎಂಬುವವರು ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ದಾಳಿಯಲ್ಲಿ ಬಿಜೆಪಿ ನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಅನ್ವರ್ ಖಾನ್ ಅವರ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪೊಲೀಸರು ಉಗ್ರರ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಹಮದ್ ಅವರು ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸಿದ ಬಳಿಕ ಸ್ಥಳವನ್ನು ಸುತ್ತುವರೆದ ಸೇನಾ ಪಡೆಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಗ್ರರ ಕುರಿತ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.
ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಒಟ್ಟು ಮೂವರು ಉಗ್ರರಿದ್ದರು ಎಂಬ ಮಾಹಿತಿಗಳು ಲಭ್ಯವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಜಮ್ಮು ಮತ್ತು ಕಾಶ್ಮೀರTerror AttackArmyJammu and KashmirterroristBJP leaderಸೇನೆಉಗ್ರರ ದಾಳಿಪುಲ್ವಾಮPulwamaಬಿಜೆಪಿ ನಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


