ವೈಎಸ್ ಆರ್ ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ?
ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ ನೀಡುವ ಸಾಧ್ಯತೆ ಇದೆ.

Published On :
ಮುಂಬೈ: ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ ನೀಡುವ ಸಾಧ್ಯತೆ ಇದೆ.
ಎನ್ ಡಿಎ ಮೈತ್ರಿಕೂಟದ ಪ್ರಮುಖ ಮಿತ್ರ ಪಕ್ಷ ಶಿವಸೇನೆ ಇದೀಗ ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷ ನೀಡಿರುವ ಅವಿಶ್ವಾಸ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಈಗಾಗಲೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶಿವಸೇನೆ ಸಂಸದರ ಸಭೆ ಕರೆದಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ನೀಡಲಾಗಿರುವ ವಿಶ್ವಾಸವ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಬೇಕೇ ಇಲ್ಲವೆ ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ.
ಇನ್ನು ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದ್ದರೂ, ಕೇಂದ್ರ ಸರ್ಕಾರದಲ್ಲಿ ತನ್ನ ಸಂಸದರಾ ಪಾಲ್ಗೊಂಡಿದ್ದರೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಿವಸೇನೆ, ಬಹುತೇಕ ಎನ್ ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಮೋದಿ ಸರ್ಕಾರದ ವಿರುದ್ಧ ಹಲವು ಸೈದ್ಧಾಂತಿಕ ನಿಲುವುಗಳನ್ನು ಹೊಂದಿರುವ ಶಿವಸೇನೆ ಈ ಹಿಂದೆ ಸಾಕಷ್ಟು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ಳಾಳಿ ನಡೆಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದ ಮೂಲಕ ಶಿವಸೇನೆ ಮೋದಿ ಸರ್ಕಾರದ ವಿರುದ್ಧ ವಾಗ್ಗಾಳಿ ನಡೆಸಿದೆ.
ಹೀಗಾಗಿ ನಾಳೆ ನಡೆಯಲಿರುವ ಸಭೆಯಲ್ಲಿ ಶಿವಸೇನೆ ಮೋದಿ ಸರ್ಕಾರದಿ ವಿರುದ್ಧ ನೀಡಲಾಗಿರುವ ಅವಿಶ್ವಾಸ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿಶಿವಸೇನೆNew DelhiTDPShiv SenaModi governmentಮೋದಿ ಸರ್ಕಾರಟಿಡಿಪಿNo Confidence Motionಅವಿಶ್ವಾಸ ನಿರ್ಣಯYSRCPವೈಎಸ್ ಆರ್ ಸಿಪಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


