ದೇಶ

ಟಿಡಿಪಿ ಎನ್ ಡಿಎ ಮೈತ್ರಿಕೂಟ ತೊರೆದಿದ್ದು ಆಂಧ್ರದಲ್ಲಿ ಬಿಜೆಪಿ ಬೆಳವಣಿಗೆಗೆ ಸಹಕಾರಿ!

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ವಿಳಂಬ ಧೋರಣೆಯಿಂದ ಬೇಸತ್ತು ತೆಲುಗು ದೇಶಂ ಪಕ್ಷ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದೆ.

ಟಿಡಿಪಿ ಎನ್ ಡಿಎ ಮೈತ್ರಿಕೂಟ ತೊರೆದಿದ್ದು ಆಂಧ್ರದಲ್ಲಿ ಬಿಜೆಪಿ ಬೆಳವಣಿಗೆಗೆ ಸಹಕಾರಿ!
ಆಂಧ್ರಪ್ರದೇಶ
Published On :
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ವಿಳಂಬ ಧೋರಣೆಯಿಂದ ಬೇಸತ್ತು ತೆಲುಗು ದೇಶಂ ಪಕ್ಷ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದೆ. ಈ ಬೆಳವಣಿಗೆಯನ್ನು ಆಂಧ್ರಪ್ರದೇಶದಲ್ಲಿ ಬಿಜೆಪಿ ಬೆಳವಣಿಗೆಗೆ ಸಹಕಾರಿ ಎಂದು ವಿಶ್ಲೇಷಿಸಲಾಗುತ್ತಿದೆ. 
ಟಿಡಿಪಿ ಎನ್ ಡಿಎ ಮೈತ್ರಿ ತೊರೆದಿರುವುದನ್ನು ಬಿಜೆಪಿ ಸಹ ಸ್ಥಳೀಯವಾಗಿ ತನ್ನ ಬೆಳವಣಿಗೆಗೆ ಸಹಕಾರಿ ಎಂದೇ ಹೇಳುತ್ತಿದ್ದು, ಕೇಂದ್ರದ ವಿರುದ್ಧ ಅಪಪ್ರಚಾರ ಮಾಡಿದ್ದ ನಂತರ ಟಿಡಿಪಿ ಎನ್ ಡಿಎ ಮೈತ್ರಿಕೂಟ ತೊರೆಯಲಿದೆ ಎಂಬುದು ಸ್ಪಷ್ಟವಾಗಿತ್ತು. ಟಿಡಿಪಿ ಮೈತ್ರಿ ತೊರೆದಿರುವುದು ಬಿಜೆಪಿಗೆ ಸ್ಥಳೀಯವಾಗಿ ಬೆಳವಣಿಗೆ ಸಾಧಿಸಲು ಒಳ್ಳೆಯ ಅವಕಾಶ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಟ್ವೀಟ್ ಮಾಡಿದ್ದಾರೆ. 
ಜಡ ಆಡಳಿತವನ್ನು ಮರೆಮಾಚುವುದಕ್ಕೆ ಟಿಡಿಪಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ ಎಂಬುದನ್ನು ಆಂಧ್ರಪ್ರದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ.  ಟಿಡಿಪಿ ಮೈತ್ರಿ ತೊರೆದಿರುವುದರಿಂದ ಬಿಜೆಪಿಗೆ ನಷ್ಟವಾಗುವುದಕ್ಕಿಂತಲೂ ಉತ್ತಮ ಅವಕಾಶವೇ ಆಗಲಿದೆ ಎಂದು ನರಸಿಂಹ ರಾವ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.